ಸ್ಥಳೀಯ

ನಸುಕಿನ ಜಾವ ಪುತ್ತೂರು ರಸ್ತೆಯಲ್ಲಿ ಕಾಡುಕೋಣಗಳು: ವಾಹನ ಸವಾರರಲ್ಲಿ ಆತಂಕ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ಬೈಪಾಸ್ ರಸ್ತೆಯ ದುರ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ಎರಡು ಕಾಡುಕೋಣಗಳು ರಸ್ತೆಯಲ್ಲೇ ಪ್ರತ್ಯಕ್ಷಗೊಂಡ ಘಟನೆ ನಡೆದಿದೆ.

ಮುಂಜಾನೆ ರಸ್ತೆಯಲ್ಲಿ ಕಾಡುಕೋಣಗಳು ನಿಂತಿರುವುದನ್ನು ಕಂಡ ಸ್ಥಳೀಯರು, ಸಾರ್ವಜನಿಕರು ಹಾಗೂ ವಾಹನ ಸವಾರರು ಕೆಲಕಾಲ ಆತಂಕಕ್ಕೊಳಗಾದರು. ಜನವಸತಿ ಹಾಗೂ ವ್ಯಾಪಾರೀ ಪ್ರದೇಶದ ಸಮೀಪವೇ ಕಾಡುಕೋಣಗಳು ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಭಯದ ವಾತಾವರಣಕ್ಕೆ ಕಾರಣವಾಗಿದೆ.

ಅರಣ್ಯ ಪ್ರದೇಶದ ನಾಶ ಹಾಗೂ ಆಹಾರ ಮತ್ತು ನೀರಿನ ಹುಡುಕಾಟದಿಂದ ಕಾಡುಕೋಣಗಳು ಕಾಡಿನಂಚಿನ ಜನವಸತಿ ಪ್ರದೇಶಗಳತ್ತ ಬರುತ್ತಿರುವ ಸಾಧ್ಯತೆಯಿದೆ ಎಂದು ಸ್ಥಳೀಯರು ಶಂಕಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಗಮನಹರಿಸಿ, ಕಾಡುಕೋಣಗಳು ಜನಸಂದಣಿ ಪ್ರದೇಶಗಳಿಗೆ ಪ್ರವೇಶಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ವಾಹನ ಸವಾರರು ಆಗ್ರಹಿಸಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 138