ಸ್ಥಳೀಯ

ಕಾರಿನ ಮೇಲೆ ಮರ, ವಿದ್ಯುತ್‌ ತಂತಿ ಬಿದ್ದು ಜಖಂ..ಇಬ್ಬರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ : ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ.ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಇತರ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಮಂಗಳೂರು ಮೂಲದ ನಾಲ್ವರು ಪ್ರಯಾಣಿಕರು ಕಾರಿನಲ್ಲಿ ಮೈಸೂರು ಕಡೆಗೆ ತೆರಳುತ್ತಿದ್ದ ವೇಳೆ ಹೆದ್ದಾರಿಯ ಬದಿಯಲ್ಲಿದ್ದ ಮರ ಕಾರಿನ ಮೇಲೆ ವಿದ್ಯುತ್ ತಂತಿ ಸಹಿತ ಉರುಳಿ ಬಿದ್ದಿದೆ.

SRK Ladders

ಘಟನೆಯಲ್ಲಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2