ಕಳ್ಳ ಅಂತ ಸಾರ್ವಜನಿಕರು ಪೊಲೀಸರನ್ನು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.
ಹೊಯ್ಸಳ ವಾಹನದಲ್ಲಿದ್ದ ಪೊಲೀಸರು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇವರು ಅಸಲಿ ಅಲ್ಲ ನಕಲಿ ಪೊಲೀಸರು ಎಂದು ಆರೋಪಿಸಿ ಸಾರ್ವಜನಿಕರು ಅಟ್ಟಿಸಿಕೊಂಡು ಹೋಗಿದ್ದಾರೆ. ಸಾರ್ವಜನಿಕರು ಮೊಬೈಲ್ನಲ್ಲಿ ವಿಡಿಯೋ ಮಾಡುತ್ತಾ ಅಟ್ಟಿಸಿಕೊಂಡು ಬರುತ್ತಿದ್ದಂತೆ ಪೊಲೀಸರು ಹೊಯ್ಸಳ ವಾಹನದೊಂದಿಗೆ ಪರಾರಿಯಾಗಿದ್ದಾರೆ.
ಸಾರ್ವಜನಿಕರು ಪೊಲೀಸರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.