ಬೆಳ್ತಂಗಡಿ, ಸೆ.20: ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಇತ್ತೀಚೆಗೆ ಕರ್ನಾಟಕ ಟಿವಿ ಚಾನೆಲ್‌ನಿಂದ ‘ಉತ್ತಮ ಶಾಸಕ’ ಪ್ರಶಸ್ತಿಗೆ ಪುರಸ್ಕೃತರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಶಾಸಕರ ಮಿಥಿಲಾ ಸ್ವಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ಹರೀಶ್ ಪೂಂಜಾ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಿವಣ್ಣ ಶೆಟ್ಟಿ, ಕಾರ್ಯದರ್ಶಿ ಆನಂದ ಸಾಲಿಯಾನ್, ಸದಸ್ಯರಾದ ರವೀಶ್, ಅಜಿತ್ ಕುತ್ಲೂರು, ಪ್ರಭಾಕರ, ಸಂತೋಷ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



















