tamanvi
ಸ್ಥಳೀಯ

ಪುತ್ತೂರು: ಮಹಿಳಾ ಪೊಲೀಸ್ ಠಾಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೆದರಿಕೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರು ಸೋಮವಾರ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಹಾಜರಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

ಮಾರ್ಚ್ ತಿಂಗಳಲ್ಲಿ ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸೂಚನೆ ನೀಡಿದ್ದರು.

ಪೊಲೀಸರ ಸೂಚನೆಯಂತೆ ಸೋಮವಾರ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಆಗಮಿಸಿದ ಮಹೇಶ್ ಶೆಟ್ಟಿ ತಿಮರೋಡಿ ಅವರ ಹೇಳಿಕೆಯನ್ನು ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್ ಎಂ.ಎಸ್. ದಾಖಲಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಮುಂದುವರಿದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 136