ಬೆಳ್ತಂಗಡಿ, ಸೆ.23: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಕಳೆಂಜ ಗ್ರಾಮದ ನಂದಗೋಕುಲ ಗೋಶಾಲೆಗೆ ₹10,506 ಧನಸಹಾಯ ನೀಡಲಾಯಿತು.
ಗೋಶಾಲೆಯ ಗೋವುಗಳ ಗೋಗ್ರಾಸ ಹಾಗೂ ಮೇವು ಖರೀದಿಗಾಗಿ ಈ ಧನಸಹಾಯವನ್ನು ನೀಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶವನ್ನು ಮುನ್ನಡೆಸುವ ಶಕ್ತಿ, ಆಯುರಾರೋಗ್ಯ ಹಾಗೂ ಐಶ್ವರ್ಯ ಲಭಿಸಲಿ ಮತ್ತು ಗೋಮಾತೆಯ ಅನುಗ್ರಹ ದೊರೆಯಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್ ಮೊಗ್ರು, ವಿನೀತ್ ಕೋಟ್ಯಾನ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ ಸೇರಿದಂತೆ ಮಂಡಲ ಪದಾಧಿಕಾರಿಗಳು ಹಾಗೂ ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.






















