ಸ್ಥಳೀಯ

ವಿಟ್ಲ: ಉಕ್ಕುಡದ ಸೌಪರ್ಣಿಕಾ ಕ್ರಷರ್‌ನಲ್ಲಿ ಹೊಂಡಕ್ಕೆ ಬಿದ್ದು ಮೂರು ಕಾಡುಕೋಣಗಳ ಸಾವು!!

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಉಕ್ಕುಡ ಸಮೀಪ ಕಾರ್ಯಾಚರಿಸುತ್ತಿರುವ ಸೌಪರ್ಣಿಕಾ ಕ್ರಷರ್‌ನಲ್ಲಿರುವ ದೊಡ್ಡ ಹೊಂಡಕ್ಕೆ ಬಿದ್ದು ಮೂರು ಕಾಡುಕೋಣಗಳು ಮೃತಪಟ್ಟಿರುವ ಘಟನೆ ಸೆ.25ರಂದು ನಡೆದಿದೆ.

ಇಂದು ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಮೂರು ಕಾಡುಕೋಣಗಳು ಸೌಪರ್ಣಿಕಾ ಕ್ರಷರ್‌ ಆವರಣದಲ್ಲಿ ಕಾಣಿಸಿಕೊಂಡಿದ್ದು, ಬಳಿಕ ಮರಣಬಾವಿಯಂತಿದ್ದ ದೊಡ್ಡ ಹೊಂಡಕ್ಕೆ ಬಿದ್ದು ಸಾವನ್ನಪ್ಪಿವೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶುವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಬಳಿಕ ಮೂರು ಕಾಡುಕೋಣಗಳು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಅರಣ್ಯ ಇಲಾಖೆಯ ಸಮ್ಮುಖದಲ್ಲಿ ಕಾಡುಕೋಣಗಳ ಮರಣೋತ್ತರ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೌಪರ್ಣಿಕಾ ಕ್ರಷರ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 138