ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು ಭಾಗದಲ್ಲಿ ಹಲವು ವರ್ಷಗಳ ಕಾಲ ಮೆಸ್ಕಾಂ ಇಲಾಖೆಯ ಲೈನ್‌ಮ್ಯಾನ್ ಆಗಿ ಸೇವೆ ಸಲ್ಲಿಸಿದ್ದ ಚಂದ್ರಶೇಖರ ಮೆಸ್ತಕ್ ಅವರು ತಮ್ಮ ಹುಟ್ಟೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸಂಟ್ಯಾರು ಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಹಾಗೂ ಕರ್ತವ್ಯಬದ್ಧತೆಯಿಂದ ಸೇವೆ ಸಲ್ಲಿಸಿದ ಚಂದ್ರಶೇಖರ ಮೆಸ್ತಕ್ ಅವರನ್ನು ಯತೀಶ್ ದೇವ ಅವರ ನೇತೃತ್ವದಲ್ಲಿ ಮನೆಗೆ ಆಹ್ವಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹರೀಶ್ ನಾಯಕ್ ಬಳಕ್ಕ, ಶಾಂತಪ್ಪ ಗುಂಡಿಗದ್ದೆ ಸೇರಿದಂತೆ ಮನೆಯ ಸದಸ್ಯರು ಉಪಸ್ಥಿತರಿದ್ದು, ಚಂದ್ರಶೇಖರ ಮೆಸ್ತಕ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಶುಭ ಹಾರೈಸಿದರು.
ಸಂಟ್ಯಾರು ಭಾಗದಲ್ಲಿ ಹಲವು ವರ್ಷಗಳ ಕಾಲ ಸಲ್ಲಿಸಿದ ಅವರ ಸೇವೆಯನ್ನು ಸ್ಮರಿಸಿದ ಕುಟುಂಬಸ್ಥರು ಹಾಗೂ ಸ್ಥಳೀಯರು, ಮುಂದಿನ ಸೇವಾ ಜೀವನ ಸುಖಕರವಾಗಿರಲಿ ಹಾಗೂ ಯಶಸ್ಸಿನಿಂದ ಕೂಡಿರಲಿ ಎಂದು ಹಾರೈಸಿದರು.






















