tamanvi
ಸ್ಥಳೀಯ

ಡಿ.12–13ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.12 ಮತ್ತು 13ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರುಗದ್ದೆಯಲ್ಲಿ ‘ಗಿರಿಜಾ ಕಲ್ಯಾಣೋತ್ಸವ’ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ಭಾನುವಾರ ಮುಕ್ರಂಪಾಡಿ ಸುಭದ್ರಾ ಕಲಾ ಮಂದಿರದಲ್ಲಿ ಸಭೆ ನಡೆಯಿತು.

ಟ್ರಸ್ಟ್‌ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಪುತ್ತೂರಿನಲ್ಲಿ ಕಳೆದ ಮೂರು ವರ್ಷಗಳಿಂದ ಶ್ರೀನಿವಾಸ ಕಲ್ಯಾಣೋತ್ಸವ ಆಯೋಜಿಸಲಾಗುತ್ತಿದ್ದು, ಈ ಬಾರಿ ಪ್ರಥಮ ಬಾರಿಗೆ ಗಿರಿಜಾ ಕಲ್ಯಾಣೋತ್ಸವ ನಡೆಸಲಾಗುತ್ತಿದೆ. ಡಿ.12ರಂದು ಶ್ರೀ ಮಹಾಲಿಂಗೇಶ್ವರ ದೇವರಿಗೆ ಲಕ್ಷ ಬಿಲ್ವಾರ್ಚನೆ ನಡೆಯಲಿದೆ ಎಂದು ತಿಳಿಸಿದರು.

ಸಾಮೂಹಿಕ ವಿವಾಹ

ಗಿರಿಜಾ ಕಲ್ಯಾಣೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಕಳೆದ ಬಾರಿ 13 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈ ಬಾರಿ ಡಿ.13ರಂದು ಬೆಳಗ್ಗೆ 11.20ರ ಶುಭಲಗ್ನದಲ್ಲಿ ವಿವಾಹ ನೆರವೇರಲಿದೆ. ಈಗಾಗಲೇ ಐದು ಜೋಡಿಗಳು ನೋಂದಾಯಿಸಿಕೊಂಡಿದ್ದು, ಮನೆ ಮದುವೆಯ ರೀತಿಯಲ್ಲಿ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಡಿ.12ರಂದು ಸಂಜೆ ಧಾರ್ಮಿಕ ಸಭೆ ‘ಕೇಸರಿ ಸಂಗಮ’ ಆಯೋಜಿಸಲಾಗಿದ್ದು, 11 ಮಂದಿ ಮಠಾಧೀಶರು ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.

ಎರಡು ದಿನಗಳ ಕಾರ್ಯಕ್ರಮದಲ್ಲಿ ಸುಮಾರು ಎರಡು ಲಕ್ಷ ಮಂದಿಗೆ ಉಪಹಾರ ಹಾಗೂ ಅನ್ನದಾನ ವ್ಯವಸ್ಥೆ ಮಾಡಲಾಗಿದೆ. ಡಿ.12ರಂದು ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕೇರಳದ ಪ್ರಸಿದ್ಧ ತಂಡದಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಗಿರಿಜಾ ಕಲ್ಯಾಣೋತ್ಸವ ಸಮಿತಿ ರಚನೆ

ಗಿರಿಜಾ ಕಲ್ಯಾಣೋತ್ಸವದ ಯಶಸ್ವಿ ಆಯೋಜನೆಗಾಗಿ ಸಮಿತಿ ರಚಿಸಲಾಗಿದೆ. ಡಾ. ಅಖಿಲೇಶ್ ಪಾಣಾಜೆ ಅಧ್ಯಕ್ಷರಾಗಿದ್ದು, ಅನಿಲ್ ಕುಮಾರ್ ಕಣ್ಣನ್ಮೂಲೆ ಕಾರ್ಯಾಧ್ಯಕ್ಷರು ಹಾಗೂ ಅನಿಲ್ ತೆಂಕಿಲ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಮುಗೇರೋಡಿ ಬಾಲಕೃಷ್ಣ ರೈ, ಗುಂಡ್ಯಡ್ಕ ವಾಸು ಪೂಜಾರಿ, ರಘು ಬೆಳ್ಳಿಪ್ಪಾಡಿ, ಮೊನಪ್ಪ ಪುರುಷ ಮುಗೇರಡ್ಕ ಹಾಗೂ ಗಣೇಶ್ ಕಾಮತ್ ಉಪ್ಪಿನಂಗಡಿ ಅವರನ್ನು ನೇಮಕ ಮಾಡಲಾಗಿದೆ.

ಪೂರ್ವಭಾವಿ ಸಭೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀ ರಾಮ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಫಾಟೆ, ಹರೀಶ್ ಮರುವಾಲ, ಕೋಶಾಧಿಕಾರಿ ಸುಜಿತ್ ಕಜಿ ಹಾಗೂ ಸೀತಾ ಪರಿವಾರ ಅಧ್ಯಕ್ಷೆ ಪ್ರೇಮಾ ರಾಧಾಕೃಷ್ಣ ರೈ ಉಪಸ್ಥಿತರಿದ್ದರು.

ಸೀತಾ ಪರಿವಾರದ ಪ್ರಧಾನ ಕಾರ್ಯದರ್ಶಿ ಅನ್ನಪೂರ್ಣ ಎಸ್. ರಾವ್ ಪ್ರಾರ್ಥಿಸಿದರು. ಸಂಘಟನಾ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಸ್ವಾಗತಿಸಿದರು. ರವಿಕುಮಾರ್ ರೈ ಕೆದಂಬಾಡಿ ನಿರೂಪಿಸಿದರು. ಗಿರಿಜಾ ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಗೂಂಡಾ ಕಾಯ್ದೆ ಜಾರಿ ಖಂಡಿಸಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ: ಸೆ.28ರ ಬಿ.ಸಿ. ರೋಡ್ ಚಲೋಗೆ ಬೆಂಬಲ

ಮಂಗಳೂರು: ಬಂಟ್ವಾಳದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯವು ಭರತ್…

1 of 137