Gl harusha
ಕರಾವಳಿಸ್ಥಳೀಯ

ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ! ಮಾತು ಉಳಿಸಿಕೊಂಡರೇ ಸಂಸದ ನಳಿನ್!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಪೊಲೀಸರಿಗೆ ಧಮ್ಕಿ ಹಾಕಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿ, ಹರೀಶ್ ಪೂಂಜಾ ಮನೆಗೆ ತೆರಳಿದ್ದ ಪೊಲೀಸರು ಬರಿಗೈಯಲ್ಲಿ ವಾಪಾಸ್ ಆಗಿದ್ದರು. ಇದೀಗ ಹರೀಶ್ ಪೂಂಜಾ ಅವರು ಠಾಣೆಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಹೇಳಲಾಗಿದೆ.

srk ladders
Pashupathi
Muliya

ಬೆಳ್ತಂಗಡಿ ಠಾಣಾ ಪೊಲೀಸರು ಹರೀಶ್ ಪೂಂಜಾ ಅವರ ಮನೆಗೆ ತೆರಳಿದ ಸಂದರ್ಭ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ರವರು, ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿದ್ದರು. ಅದರಂತೆ ಸಂಸದರು ಹರೀಶ್ ಪೂಂಜಾರನ್ನು ಪೊಲೀಸರೊಂದಿಗೆ ಠಾಣೆಗೆ ಕಳುಹಿಸಿರುತ್ತಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts