tamanvi
ಸ್ಥಳೀಯ

ಪುತ್ತೂರು ಬಿಜೆಪಿ ರೈತ ಮೋರ್ಚಾ ಮಾಸಿಕ ಸಭೆ: ರೈತರ ವಿಚಾರದಲ್ಲಿ ಪ್ರತಿಭಟನೆಗೆ ನಿರ್ಧಾರ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ ರೈತ ಮೋರ್ಚಾದ ಮಾಸಿಕ ಸಭೆ ಅ.1ರಂದು ಪುತ್ತೂರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆಯಿತು.

ಸಭೆಯ ಆರಂಭದಲ್ಲಿ ಇತ್ತೀಚೆಗೆ ನಿಧನರಾದ ಪಕ್ಷದ ಹಿರಿಯ ಸದಸ್ಯ, ಜಿಲ್ಲಾ ರೈತ ಮೋರ್ಚಾದ ಮಾಜಿ ಅಧ್ಯಕ್ಷ, ಬಂಟ್ವಾಳ ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ವಿಟ್ಲ ಗ್ರಾಮ ಮತ್ತು ಪಟ್ಟಣ ಪಂಚಾಯತ್‌ಗಳ ಮಾಜಿ ಸದಸ್ಯರಾಗಿದ್ದ ಸಂಕಪ್ಪ ಗೌಡ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಸಭೆಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರ್, ಪುತ್ತೂರಿನ ನಿಕಟಪೂರ್ವ ಶಾಸಕ ಸಂಜೀವ ಮಠಂದೂರು, ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್.ಸಿ. ನಾರಾಯಣ, ಜಿಲ್ಲಾ ಕಾರ್ಯದರ್ಶಿ ಹಾಗೂ ರೈತ ಮೋರ್ಚಾ ಜಿಲ್ಲಾ ಪ್ರಭಾರಿ ಪುಷ್ಪಾ ಮೇದಪ್ಪ, ಜಿಲ್ಲಾ ಪ್ರಶಿಕ್ಷಣ ವರ್ಗದ ಸಹ ಸಂಚಾಲಕ ಪುರುಷೋತ್ತಮ್ ಮುಂಗ್ಲಿಮನೆ, ರೈತ ಮೋರ್ಚಾ ಅಧ್ಯಕ್ಷ ಶರತ್ ಚಂದ್ರ ಬೈಪಾಡಿತ್ತಾಯ, ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ದೇವ ಸಂಟ್ಯಾರು ಹಾಗೂ ಲಕ್ಷ್ಮಣ ಬೆಳ್ಳಿಪ್ಪಾಡಿ ಸೇರಿದಂತೆ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ನಂತರ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆಯ 25ನೇ ವರ್ಷದ ಹಿನ್ನೆಲೆಯಲ್ಲಿ ನಡೆಯಲಿರುವ ‘ಸೇವಾ ಸಂಕಲ್ಪ ಅಭಿಯಾನ’ದ ರೂಪುರೇಷೆಗಳ ಕುರಿತು ಚರ್ಚೆ ನಡೆಸಲಾಯಿತು. ಅಭಿಯಾನದ ವಿವಿಧ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಭೆಯಲ್ಲಿ ಕರೆ ನೀಡಲಾಯಿತು.

ಇದೇ ವೇಳೆ ಮುಂದಿನ ಕಾರ್ಯಕ್ರಮಗಳ ಬಗ್ಗೆಯೂ ಚರ್ಚೆ ನಡೆಯಿತು. ಅಕ್ಟೋಬರ್ 12ರಂದು ರೈತ ಪ್ರಮುಖರ ಸಭೆ ನಡೆಸಲು ತೀರ್ಮಾನಿಸಲಾಯಿತು. ಮುಂದಿನ ತಿಂಗಳು ರೈತರ ವಿಚಾರದಲ್ಲಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆಯೂ ಸಭೆಯಲ್ಲಿ ನಿರ್ಧರಿಸಲಾಯಿತು.

ಅಕ್ಟೋಬರ್ 2ರಂದು ಸಾಂದೀಪನಿ ಶಾಲೆಯಲ್ಲಿ ನಡೆಯಲಿರುವ ‘ಸೇವಾ ಮೇರಾ ಯೋಗದಾನ್, ಸೇವಾ ಸಂಕಲ್ಪ ಅಭಿಯಾನ’ದಲ್ಲಿ ಎಲ್ಲರೂ ಭಾಗವಹಿಸುವಂತೆ ರೈತ ಮೋರ್ಚಾ ಅಧ್ಯಕ್ಷರು ಮನವಿ ಮಾಡಿದರು. ಮಾತೃ ಸಂಘಟನೆಯ ವಿವಿಧ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಗೂಂಡಾ ಕಾಯ್ದೆ ಜಾರಿ ಖಂಡಿಸಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ: ಸೆ.28ರ ಬಿ.ಸಿ. ರೋಡ್ ಚಲೋಗೆ ಬೆಂಬಲ

ಮಂಗಳೂರು: ಬಂಟ್ವಾಳದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯವು ಭರತ್…

1 of 137