ಸ್ಥಳೀಯ

ಪುತ್ತೂರಿನಲ್ಲಿ ಅಕ್ರಮ ಗೋವು ಸಾಗಾಟ ಆರೋಪ: 11 ಗೋವುಗಳ ರಕ್ಷಣೆ, ಓರ್ವ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು, 11 ಗೋವುಗಳನ್ನು ರಕ್ಷಿಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

gl

ಪುತ್ತೂರು ತಾಲೂಕಿನ ಕುಂಜೂರು ಪಂಜದ ಮಯ್ಯ ಫಾರ್ಮ್ಸ್‌ನಿಂದ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಬುಳೇರಿಕಟ್ಟೆ ಮಾರ್ಗವಾಗಿ ಗೋವುಗಳನ್ನು ಕೇರಳದತ್ತ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಗೋವುಗಳನ್ನು ಕೈಕಾಲು ಕಟ್ಟಿ, ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರಿಂದ ಪೊಲೀಸರಿಗೆ ದೊರೆತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದ್ದು, ವಾಹನವನ್ನು ಪತ್ತೆಹಚ್ಚಿ ಅದರಲ್ಲಿದ್ದ 11 ಗೋವುಗಳನ್ನು ರಕ್ಷಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೋವುಗಳ ಸಾಗಾಟದ ಹಿನ್ನೆಲೆ ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವವರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಗೂಂಡಾ ಕಾಯ್ದೆ ಜಾರಿ ಖಂಡಿಸಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ: ಸೆ.28ರ ಬಿ.ಸಿ. ರೋಡ್ ಚಲೋಗೆ ಬೆಂಬಲ

ಮಂಗಳೂರು: ಬಂಟ್ವಾಳದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯವು ಭರತ್…

1 of 138