ಪುತ್ತೂರು: ಬಿರುಸಿನ ಗಾಳಿ ಮಳೆಯ ಪರಿಣಾಮ ಕೇಪುಳು ಸಮೀಪ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ನಡೆದಿದೆ.
ಮರ ರಸ್ತೆಗೆ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ತುಸು ಅಡಚಣೆ ಉಂಟಾಯಿತು. ಘಟನೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಗಾಳಿ ಮಳೆಯ ಸಂದರ್ಭ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

























