ಸ್ಥಳೀಯ

ನಾಳೆ ವಿದ್ಯುತ್ ಕಡಿತ: ಪುತ್ತೂರು, ಕಡಬ, ಉಪ್ಪಿನಂಗಡಿ ವಿದ್ಯುತ್ ಬಳಕೆದಾರರಿಗೆ ಮೆಸ್ಕಾಂ ಪ್ರಕಟಣೆ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿದ್ಯುತ್ ಮಾರ್ಗದ ನಿರ್ವಹಣೆ ಹಾಗೂ ವಿದ್ಯುತ್ ಉಪಕೇಂದ್ರದ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಂದು ಪುತ್ತೂರು, ಕಡಬ, ಉಪ್ಪಿನಂಗಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಪುತ್ತೂರು–ಕಡಬ–ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದ ನಿರ್ವಹಣೆ ಹಾಗೂ ಉಪಕೇಂದ್ರದ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಕಡಬ 33/11 ಕೆ.ವಿ. ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್‌ಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಇದೇ ವೇಳೆ, ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಪುತ್ತೂರು 110/33/11 ಕೆ.ವಿ. ವಿದ್ಯುತ್ ಉಪಕೇಂದ್ರದ ಕಾಂಚನ ಫೀಡರ್ ಹಾಗೂ ಕರಾಯ ವಿದ್ಯುತ್ ಉಪಕೇಂದ್ರದ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮಾರ ಫೀಡರ್‌ಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಈ ವಿದ್ಯುತ್ ಕಡಿತದಿಂದ ಪೆರಿಯಡ್ಕ, ಗೋಕುಲನಗರ, ಕೆಮ್ಮಾರ, ಉಪ್ಪಿನಂಗಡಿ, ಬಜತ್ತೂರು ಸೇರಿದಂತೆ ಸಂಬಂಧಪಟ್ಟ ಫೀಡರ್‌ಗಳ ವ್ಯಾಪ್ತಿಯ ಪ್ರದೇಶಗಳ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 139