ಸ್ಥಳೀಯ

ಪ್ರಗತಿಬಂಧು ಸ್ವಸಹಾಯ ಸಂಘಗಳ ಕಸಬಾ, ಬೊಳುವಾರು, ಜಿಡೆಕಲ್ಲು, ಪಡೀಲು, ಸಾಲ್ಮರ ಒಕ್ಕೂಟಗಳ ಪದಗ್ರಹಣ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಪುತ್ತೂರು ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಕಸಬಾ, ಬೊಳುವಾರು, ಜಿಡೆಕಲ್ಲು, ಪಡೀಲು, ಸಾಲ್ಮರ ಒಕ್ಕೂಟಗಳ ಪದಗ್ರಹಣ ಸಮಾರಂಭ ನವಂಬರ್ 15ರಂದು ಬೊಳುವಾರಿನ ವಿಶ್ವಕರ್ಮ  ಸಮುದಾಯ ಭವನದಲ್ಲಿ ನಡೆಯಿತು.

ಶಾಸಕ ಅಶೋಕ್ ರೈ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ವಲಯ ಅಧ್ಯಕ್ಷ ಬಾಲಕೃಷ್ಣ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿದ್ದ ಶ್ರೀ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಡಾ ರವೀಶ್ ಪಡುಮಲೆ, ಶ್ರೀ ಮಂಜುನಾಥೇಶ್ವರ ಕಾಲೇಜಿನ ಉಪನ್ಯಾಸಕಿ ಹರಿಣಿ ಪುತ್ತೂರಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ದ.ಕ 2 ಜಿಲ್ಲಾ ನಿರ್ದೇಶಕ ಎ ಬಾಬು ನಾಯ್ಕ, ಪುತ್ತೂರು ತಾಲೂಕು ಯೋಜನಾಧಿಕಾರಿ ಶಶಿಧರ್ ಎಮ್, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಉಮೇಶ್ ನಾಯಕ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ತಾಲೂಕಿನ ಅಧ್ಯಕ್ಷ ಸತೀಶ್ ನೈಾಕ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರೂ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಆದ ಮಹಾಬಲ ರೈ ವಳತ್ತಡ್ಕ ಶುಭ ಹಾರೈಸಿದರು.

ಕೃಷಿ ಅಧಿಕಾರಿ ಹರೀಶ್ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 139