ಸ್ಥಳೀಯ

ಬಿ.ಸಿ.ರೋಡ್‌: ಬಸ್ ಹತ್ತುವ ವೇಳೆ ಮಹಿಳೆ ಬ್ಯಾಗ್ ನಿಂದ ಚಿನ್ನ ಕಳವು!

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಬಿ.ಸಿ ರೋಡಿನ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಮಹಿಳೆಯೊಬ್ಬರು ಗಂಡ ಮತ್ತು ಮಗುವಿನ ಜೊತೆ ಬಸ್ ಹತ್ತುವ ವೇಳೆ ಬ್ಯಾಗಿನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾದ ಪ್ರಕರಣ ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮ ನಡಿಗಲ್ ಆರ್ದಶ ನಗರ ನಿವಾಸಿ ಜಗದೀಶ ಅವರ ಪತ್ನಿ ಶಶಿಕಲಾ ಅವರು ಬಿ.ಸಿ ರೋಡಿನಿಂದ ಬೆಳ್ತಂಗಡಿಗೆ ಪ್ರಯಾಣಿಸುವುದಕ್ಕೆ ಬಸ್ ಹತ್ತುವ ವೇಳೆ ಬ್ಯಾಗ್ ನೊಳಗಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನ ಕಳವಾಗಿದೆ.

SRK Ladders

ಮಗುವಿನ ಜೊತೆ ಗಂಡ ಬಸ್ ಹತ್ತಿದ್ದು, ಅವರ ಹಿಂದೆ ಶಶಿಕಲಾ ಅವರು ಬಸ್ ಹತ್ತುವ ಸಮಯದಲ್ಲಿ ಹಿಂಬದಿಯಿಂದ ಬ್ಯಾಗ್ ನೊಳಗಿದ್ದ ಚಿನ್ನದ ಪಾಕೆಟ್ ನ್ನು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬೆಳ್ತಂಗಡಿ ಧರ್ಮಸ್ಥಳ ಕಡೆಗೆ ಹೋಗುವ ಬಸ್ಸಿಗಾಗಿ ಕಾಯುವ ಸಮಯ 10:30 ಗಂಟೆಗೆ ಬ್ಯಾಗ್ನಲ್ಲಿದ್ದ ಸುಮಾರು 45 ಗ್ರಾಂ ವಿವಿಧ ಶೈಲಿಯ ಮತ್ತು ವಿವಿಧ ಮಾದರಿಯ ಹಳೆಯ ಚಿನ್ನಾಭರಣಗಳು ಕಾಣೆಯಾಗಿದೆ. ಸುಮಾರು 2 ಲಕ್ಷ ರೂ. ಮೌಲ್ಯದ ಚಿನ್ನ ಕಳವಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2