ಪುತ್ತೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಐಟಿಐ ನರಿಮೊಗರು ಪುತ್ತೂರು ಮತ್ತು ಪೊಲೀಸ್ ಇಲಾಖೆ ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದ.ಕ, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಲಯನ್ಸ್ ಕ್ಲಬ್ ಪುತ್ತೂರು ಇವರ ಸಹಕಾರದೊಂದಿಗೆ ಡ್ರಗ್ಸ್ ವಿರೋಧ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಯಿತು.
ಕಾರ್ಯಕ್ರಮವನ್ನು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪುತ್ತೂರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಸದಾನಂದ ನಾಗಪ್ಪ ನಾಯ್ಕ್ ಉದ್ಘಾಟಿಸಿ, ಡ್ರಗ್ಸ್ ಬಗ್ಗೆ ಮಾಹಿತಿ ನೀಡಿದರು.
ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಎಂ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎ.ಎಸ್.ಐ. ವಾಸು ನಾಯಕ್ ಅವರು ಅಮಲು ಪದಾರ್ಥಗಳಿಂದ ಆಗುವ ದುಷ್ಪರಿಣಾಮ ಬಗ್ಗೆ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ ಕೊಮ್ಮಂಡ, ಜೊತೆ ಕಾರ್ಯದರ್ಶಿ ಉದಯ ಚಂದ್ರ K, ಲಯನ್ಸ್ ಕ್ಲಬ್ ಅಧ್ಯಕ್ಷರಾದ ಮಂಜುನಾಥ, ಪ್ಯಾರ ಲೀಗಲ್ ವಾಲೆಂಟಿಯರ್ ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಮಹಮ್ಮದ್ ರಫೀಕ್, ನರಿಮೊಗರು ಕಾಲೇಜಿನ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸರಕಾರಿ ಐಟಿಐ ನರಿಮೊಗರು ಪುತ್ತೂರು ಕಿರಿಯ ತರಬೇತಿ ಅಧಿಕಾರಿ ಯೋಗೀಶ್ ಪಿ. ಸ್ವಾಗತಿಸಿದರು, ಉಷಾ ಎಂ ವಂದಿಸಿದರು. ಪ್ಯಾರ ಲೀಗಲ್ ವಾಲೆಂಟಯರ್ ನಯನ ರೈ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಸಹಕರಿಸಿದರು.

















