ಸ್ಥಳೀಯ

ಇಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ; ಮೆಸ್ಕಾಂ ಪ್ರಕಟಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ನವೆಂಬರ್ 28ರಂದು ಪುತ್ತೂರು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

110/33/11 ಕೆ.ವಿ. ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಕಾರ್ಯನಿರ್ವಹಿಸುವ ನಗರ, ಕಾಂಚನ ಹಾಗೂ ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಈ ವಿದ್ಯುತ್ ಮಾರ್ಗಗಳ ಮೂಲಕ ಪೂರೈಕೆ ಪಡೆಯುವ ಕಲ್ಲೇಗ, ನಗರ, ಬನ್ನೂರು, ಕೊಡಿಪ್ಪಾಡಿ, ಮಂಜಲ್ಪಡ್ಪು, ಬಜತ್ತೂರು ಹಾಗೂ ನೆಕ್ಕಿಲಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಿಗದಿತ ಅವಧಿಯಲ್ಲಿ ನಡೆಯುವ ಕಾಮಗಾರಿಗಳಿಗೆ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಹಾಲಿಂಗೇಶ್ವರ ದೇವಸ್ಥಾನದ ಅನುಮತಿ ರಹಿತ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ: ವಿರೂಪಾಕ್ಷ ಮಚ್ಚಿಮಲೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಲಾಖೆಯ ಅನುಮತಿ ಇಲ್ಲದೇ ಅನೇಕ…

ಡಿ. 20ರ ಒಕ್ಕಲಿಗ ಸಮುದಾಯದ ವಾರ್ಷಿಕ ಸಮಾವೇಶದ ಪ್ರಚಾರಕ್ಕೆ ಕುಂಬ್ರ ವಲಯದ ಸಿದ್ಧತೆ – ತಾಲೂಕು ಕ್ರೀಡಾಕೂಟದ ಕುರಿತು ಚರ್ಚೆ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹ ಸಂಘಟನೆಗಳ ಸಹಯೋಗದಲ್ಲಿ ಡಿಸೆಂಬರ್…

1 of 141