ರಾಜ್ಯ ವಾರ್ತೆಸ್ಥಳೀಯ

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ವಿದೇಶಾಂಗ ಸಚಿವಾಲಯ!!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದಲ್ಲಿ ಸಿಲುಕಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯ ಮೊದಲ ಬಾರಿಗೆ ಬಿಗ್ ಶಾಕ್ ಕೊಟ್ಟಿದೆ.

ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಎಸ್ಐಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸೆರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದರ ಬೆನ್ನಲೇ ಇದೀಗ ವಿದೇಶಾಂಗ ಸಚಿವಾಲಯವು, ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದರಿಂದ ಪ್ರಜ್ವಲ್ಗೆ ಹಂತ ಹಂತವಾಗಿ ಸಂಕಷ್ಟ ಶುರುವಾದಂತಾಗಿದೆ.

SRK Ladders

ಕಳೆದ ಏಪ್ರಿಲ್ 26ರಂದೇ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಜರ್ಮನಿಗೆ ಓಡಿ ಹೋಗಿದ್ದಾರೆ. ಯಾವುದೇ ನೋಟಿಸ್ ಜಾರಿ ಮಾಡಿದರೂ ಸಹ ಪ್ರಜ್ವಲ್ ಕ್ಯಾರೇ ಎನ್ನುತ್ತಿಲ್ಲ. ಈ ಸಂಬಂಧ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಆದ್ರೆ, ಪತ್ರಕ್ಕೆ ಸ್ಪಂದನೆ ಸಿಗದ ಕಾರಣ ಮೊನ್ನೇ ಅಷ್ಟೇ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಇದೀಗ ವಿದೇಶಾಂಗ ಸಚಿವಾಲಯ ಪ್ರಜ್ವಲ್ಗೆ ಶೋಕಾಸ್ ನೋಟಿಸ್ ನೀಡಿದೆ. ಈ ನೋಟಿಸ್ ಮೂಲಕ ಪಾಸ್ಪೋರ್ಟ್ ರದ್ದುಗೊಳಿಸುವ ಬಗ್ಗೆ ಪ್ರಜ್ವಲ್ಗೆ ಉತ್ತರ ಕೇಳಿದೆ. ಇದರಿಂದ ಪ್ರಜ್ವಲ್ಗೆ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.

ಅಶ್ಲೀಲ ಪೆನ್ಡ್ರೈವ್ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್ಐಟಿ ವಹಿಸಿದ್ದು, ಎಸ್ಐಟಿ ಅಧಿಕಾರಿಗಳು ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದಾರೆ. ಆದ್ರೆ, ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಮಾತ್ರ ಇದುವರೆಗೂ ಪತ್ತೆಯಾಗಿಲ್ಲ. ಈಗಾಗಲೇ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಬರುವಂತೆ ಪ್ರಜ್ವಲ್ಗೆ ನೋಟಿಸ್ ಜಾರಿ ಮಾಡಿದ್ದಾರೆ. ಆದ್ರೆ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ವಿದೇಶದಲ್ಲಿದ್ದುಕೊಂಡೇ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಲು ಕೆಲ ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಆದರೆ ಕಾಲಾವಕಾಶ ಮುಗಿದರೂ ಸಹ ಪ್ರಜ್ವಲ್ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ಕುಳಿತುಕೊಂಡಿದ್ದಾರೆ.

ಜರ್ಮನಿಯಿಂದ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಮಾಡುತ್ತಾರೆ. ಆದ್ರೆ, ಕೊನೆ ಕ್ಷಣದಲ್ಲಿ ಟಿಕೆಟ್ ರದ್ದು ಮಾಡುತ್ತಿದ್ದಾರೆ. ಒಟ್ಟು ಮೂರು ಬಾರಿ ಟಿಕೆಟ್ ಬುಕ್ ಮಾಡುವುದು ಬಳಿಕ ರದ್ದು ಮಾಡಿದ್ದಾರೆ. ಇದರೊಂದಿಗೆ ವಿದೇಶದಲ್ಲಿದ್ದುಕೊಂಡು ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4