tamanvi
ಕರಾವಳಿಸ್ಥಳೀಯ

ಉಡುಪಿಯಲ್ಲಿ ಗ್ಯಾಂಗ್ ವಾರ್ ವೀಡಿಯೋ ವೈರಲ್: ಬಂಧನ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಡಿದ್ದಾರೆ.

ಮೇ.18 ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 178