ರಾಜ್ಯ ವಾರ್ತೆಸ್ಥಳೀಯ

ಕ್ಷುಲ್ಲಕ ಕಾರಣಕ್ಕೆ ಪತಿ – ಪತ್ನಿ ಜಗಳ!! ಕೋಳಿಯಂತೆ ಹೆಂಡತಿಯ ಕತ್ತು ತುಂಡರಿಸಿ, ಚರ್ಮ ಸುಲಿದ ಕ್ರೂರಿ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು: ಇಲ್ಲಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ ನಡೆದಿದ್ದು, ಕತ್ತು ಹಾಗೂ ದೇಹದ ಅಂಗಾಂಗಗಳನ್ನ ಕತ್ತರಿಸಿ ಚರ್ಮ ಸುಲಿದು ಭೀಭತ್ಸವಾಗಿ ಹತ್ಯೆ ಮಾಡಲಾಗಿದೆ.

core technologies

ಪುಷ್ಪ(32), ಮೃತ ದುರ್ದೈವಿ.

akshaya college

ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್, ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಪ್ಪಳನ್ನ ಮದುವೆಯಾಗಿದ್ದ. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಶಿವರಾಮ್, ಮರದ ಮಿಲ್ ವೊಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡ್ತಿದ್ದ.

ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತಂತೆ. ನಿನ್ನೆ ರಾತ್ರಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಭೀಕರವಾಗಿ ಶಿವರಾಮ್ ಕೊಲೆ ಮಾಡಿದ್ದಾನೆ.

ತಾವು ವಾಸವಿದ್ದ ಅಡುಗೆ ಮನೆಯಲ್ಲೇ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ವಿಕಾರವಾಗಿ ಕೊಂದಿದ್ದಾನೆ.

ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಕೊಲೆಗೈದ ಪತಿ ಶಿವರಾಮ್ ನನ್ನ ಬಂಧಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾರ್ವಜನಿಕ ಸ್ಥಳಗಳಲ್ಲಿ ಸಾಕು ನಾಯಿ ಬಿಟ್ಟರೆ ಎಚ್ಚರಿಕೆ! ಬೀದಿ ನಾಯಿಗಳಿಗೆ ಆಹಾರ ಹಾಕಲು ಜಾಗ ಗುರುತು

ಸಾಕು ನಾಯಿಯನ್ನು ಸಾರ್ವಜನಿಕ ಸ್ಥಳದಲ್ಲಿ ಬಿಟ್ಟರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು…

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

1 of 146