ಕರಾವಳಿಸ್ಥಳೀಯ

ಜೂನ್ 01ರಿಂದ 3ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು : ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.

ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ಪ್ರಕ್ರಿಯೆ ನಡೆಯುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

SRK Ladders

ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮ್ಯದದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಪಿಲರಿಗಳು, ಸ್ಟಾರ್ ಹೊಟೇಲ್‍ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3