Gl jewellers
ರಾಜ್ಯ ವಾರ್ತೆಸ್ಥಳೀಯ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ. ನಾಗೇಂದ್ರಗೆ ಸಿಎಂ ಸೂಚನೆ..! ಮಹತ್ವದ ಚರ್ಚೆ ಬಳಿಕ ಈ ನಿರ್ಧಾರ!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Pashupathi
Papemajalu garady
Karnapady garady

ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಡುವೆ ಸರ್ಕಾರಕ್ಕೆ ಮುಖಭಂಗವಾಗಬಾರದು ಎಂದು, ಜೊತೆಗೆ ಮುಂದಿನ ತಿಂಗಳು ಮುಂಗಾರು ಅಧಿವೇಶನದಲ್ಲಿ ಈ ಬಗ್ಗೆ ಯಾವುದೇ ಕಾರಣಕ್ಕೆ ಇಕ್ಕಟ್ಟಿಗೆ ಸಿಲುಕದ ಹಾಗೇ ನೋಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇಂದು ಸಂಜೆ ಗೃಹ ಸಚಿವಲಾಯ ವರದಿಯನ್ನು ಆಧರಿಸಿ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಇದಲ್ಲದೇ ತಾವೇ ಖುದ್ದು ಈ ಬಗ್ಗೆ ಹೇಳಿಕೆ ನೀಡುವಂತೆ ಸಿಎಂ ನಾಗೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಶಿವಮೊಗ್ಗ ಅಧೀಕ್ಷಕ ಚಂದ್ರಶೇಖರ್ ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಅವರು ಸುದೀರ್ಘ ಡೆತ್ ನೋಟ್ ಬರೆದಿಟ್ಟಿದ್ದರು. ವಾಲ್ಮೀಕಿ ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಚಂದ್ರಶೇಖರನ್ 5 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಎಂಡಿ ಜೆ.ಜಿ. ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣನವರ್, ಯೂನಿಯನ್ ಬ್ಯಾಂಕ್ ಮ್ಯಾನೇಜ‌ರ್ ಶುಚಿಸ್ಮಿತಾ ರವುಲ್ ಎಂಬುವರ ಪಾತ್ರವಿದೆ ಎಂದು ಡೆತ್‌ ನೋಟ್‌ ನಲ್ಲಿ ಉಲ್ಲೇಖಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಖಾಸಗಿ ವಾಹನದಲ್ಲಿ ‘ಪೊಲೀಸ್’ ಎಂದು ಬರೆದಿದ್ದರೆ ಕ್ರಮ! ವಿಧಾನಸೌಧದಲ್ಲಿ ಗಮನ ಸೆಳೆದ ಗೃಹ ಸಚಿವರ ರಿಪ್ಲೈ!!

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್‌ ಎಂದು…

ಪುತ್ತೂರು ಪೇಟೆಯಲ್ಲಿ ನಂದಿ ರಥಯಾತ್ರೆ | ದೇಶಿ ನಂದಿಗೆ ಹಾರಾರ್ಪಣೆ, ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚನೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌,…