Gl harusha
ಸ್ಥಳೀಯ

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪುತ್ತೂರು ಆಸ್ಪತ್ರೆಗೆ ಭೇಟಿ! ಜನಸಂದಣಿ ನೋಡಿ ಸ್ಕ್ಯಾನ್ ಆ್ಯಂಡ್ ಶೇರ್ ಜಾರಿಗೆ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಅವರು ಸೋಮವಾರ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು.

srk ladders
Pashupathi
Muliya

ಪದವೀಧರ ಕ್ಷೇತ್ರದ ಚುನಾವಣೆಗೆ ಚುನಾವಣಾ ಅಬ್ಸರ್ವರ್ ಆಗಿರುವ ಅವರು, ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ ಆಗಮಿಸಿದ ಸಂದರ್ಭ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು.

ಈ ಸಂದರ್ಭ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದ್ದರಿಂದ, ಸ್ಕ್ಯಾನ್ ಆ್ಯಂಡ್ ಶೇರ್ ವ್ಯವಸ್ಥೆ ಜಾರಿಗೆ ಸೂಚಿಸಿದರು. ರೋಗಿಗಳು ಸ್ಕ್ಯಾನ್ ಮಾಡಿ ಟೋಕನ್ ವ್ಯವಸ್ಥೆ ಪಡೆದುಕೊಳ್ಳಬಹುದು. ಇದರಿಂದ ಆಸ್ಪತ್ರೆಯಲ್ಲಿ ಬಂದು ವೃಥಾ ಕಾಯುವ ಪರಿಸ್ಥಿತಿ ತಪ್ಪಲಿದೆ.

ಈಗಾಗಲೇ ಆಸ್ಪತ್ರೆಯಲ್ಲಿ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎನ್ನುವುದನ್ನು ಅವರ ಗಮನಕ್ಕೆ ತರಲಾಯಿತು.

ಆಸ್ಪತ್ರೆ, ಓಪಿಡಿ, ವೈದ್ಯಕೀಯ ಕೊಠಡಿ, ಡಯಲಿಸೀಸ್ ಕೇಂದ್ರಗಳಿಗೆ ಭೇಟಿ ನೀಡಿದರು.

ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ತಹಸೀಲ್ದಾರ್ ಕುಂಞಿ ಅಹಮ್ಮದ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಆಸ್ಪತ್ರೆ ಆಡಳಿತಾಧಿಕಾರಿ ಡಾ. ಆಶಾ ಪುತ್ತೂರಾಯ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ