Gl harusha
ಕರಾವಳಿಸ್ಥಳೀಯ

ಪ್ರಮಾಣಪತ್ರ ಸ್ವೀಕರಿಸಿದ ಕ್ಯಾಪ್ಟನ್ ಇನ್ನು ಸಂಸದ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೈ ಮುಗಿಲನ್ ಪ್ರಮಾಣ ಪತ್ರ ನೀಡಿದರು.

srk ladders
Pashupathi
Muliya

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಕುಂಪಲ, ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪುತ್ತೂರು ಎಸಿ ಜುಬಿನ್ ಮೋಹಪಾತ್ರ ಉಪಸ್ಥಿತರಿದ್ದರು.

ನಿರೀಕ್ಷೆಗೂ ಮೀರಿದ ಗೆಲುವು:

ಕ್ಯಾಪ್ಟನ್ ಚೌಟ ಅವರು ಪಡೆದ ಮತಗಳು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರ ತಳಹದಿ ಎನ್ನುವುದನ್ನು ಮತ್ತೆ ನಿರೂಪಿಸಿದೆ. ಹಿಂದಿನ ಅವಧಿಯಷ್ಟು ಅಂತರ ಪಡೆಯದೇ ಹೋದರೂ, ಈ ಬಾರಿಯ ನಿರೀಕ್ಷೆಗಿಂತಲೂ ಅಧಿಕ ಮತಗಳನ್ನು ಪಡೆದುಕೊಂಡಿದ್ದಾರೆ.

ಒಟ್ಟು 764132 ಪಡೆದುಕೊಂಡ ಬ್ರಿಜೇಶ್ ಚೌಟ ಅವರು 149208 ಮತಗಳ ಅಂತರದಿಂದ ಕ್ಷೇತ್ರವನ್ನು ತಮ್ಮದಾಗಿಸಿಕೊಂಡರು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು 614924 ಮತಗಳನ್ನು ಪಡೆದುಕೊಂಡರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ