ಸ್ಥಳೀಯ

ಯುವ ಕ್ರಿಕೆಟಿಗ ಮಂಜು ನಾಯ್ಕಾಪು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!!! ಅನುಮಾನಕ್ಕೆ ಕಾರಣವಾದ ರಾತ್ರಿ ಬಂದಿರೋ ಕೊನೆ ಕರೆ!!

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಉತ್ತಮ ಕ್ರಿಕೆಟ್ ಆಟಗಾರ ಎಂದೇ ಗುರುತಿಸಿಕೊಂಡಿದ್ದ, ಕುಂಬ್ಳೆಯ ನಾಯ್ಕಾಪು ನಿವಾಸಿ ಮಂಜು (24 ವ.) ಶನಿವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಬೆಳಿಗ್ಗೆ ಕಂಡುಬಂದಿದ್ದಾರೆ.

SRK Ladders

ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಕರೆಯೊಂದು ಬಂದಿದ್ದು, ಮಾತನಾಡುತ್ತಾ ಹೊರ ಹೋಗಿದ್ದಾರೆ. ಎಷ್ಟು ಹೊತ್ತಾದರೂ ವಾಪಾಸು ಬಂದಿಲ್ಲ. ಮನೆಯವರು ಕರೆ ಮಾಡಿದರೂ ಸ್ವೀಕರಿಸಿಲ್ಲ. ಶನಿವಾರ ಬೆಳಿಗ್ಗೆ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಗಳಲ್ಲಿ ಮಂಜು ಪಾಲ್ಗೊಳ್ಳುತ್ತಿದ್ದು, ಉತ್ತಮ ಆಟಗಾರನಾಗಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಅಂಡರ್ ಆರ್ಮ್ ಕ್ರಿಕೆಟ್ ನಲ್ಲಿ ಉತ್ತಮ ಹೆಸರು ಗಳಿಸಿದ್ದರು.

ಮೃತರು ವೆಂಕಟೇಶ್ ನಾಯಕ್, ತಾಯಿ ಜಯಂತಿ, ತಮ್ಮ ಅಭಿಷೇಕ್ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2