ಸ್ಥಳೀಯ

ಟಿವಿ ಸೆಂಟರ್‌ನಲ್ಲಿ ಅಗ್ನಿ ಅವಘಡ: ಕೋಟ್ಯಂತರ ಮೌಲ್ಯದ ಸೊತ್ತು ಬೆಂಕಿಗಾಹುತಿ

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಕುಂದಾಪುರ ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಅಂಬಾ ಟಿವಿ ಸೆಂಟರ್ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೂಲದ ಸೊತ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ.

ರವಿವಾರ ರಾತ್ರಿ 10:30ರ ಸುಮಾರಿಗೆ ಸುಧಾಕರ ಶೆಟ್ಟಿ ಮಾಲಿಕತ್ವದ ಅಂಬಾ ಟಿವಿ ಸೆಂಟರ್ ಒಳಗೆ ಸಂಭವಿಸಿದ ಶಾರ್ಟ್ ಸರ್ಕಿಟ್ ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

SRK Ladders

ಘಟನಾ ಸ್ಥಳಕ್ಕೆ ಆಗಮಿಸಿದ ಬೈಂದೂರು, ಕುಂದಾಪುರ ಉಡುಪಿಯ ಮೂರು ಅಗ್ನಿಶಾಮಕದಳದ ವಾಹನಗಳು, ಗಂಗೊಳ್ಳಿ ಪೊಲೀಸರು, ಗಂಗೊಳ್ಳಿ ಮೆಸ್ಕಾಂ ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಸಪಟ್ಟರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3