ಸ್ಥಳೀಯ

ಬೆಳ್ಳಾರೆ: ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ಳಾರೆ: ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾರೀ ಸುದ್ದಿಯಲ್ಲಿದ್ದ ಬೆಳ್ಳಾರೆ ಈಗ ಮಹಿಳೆಯೊಬ್ಬರ ಕೊಲೆ ಎನ್ನಲಾದ ವಿಚಾರದಲ್ಲಿ ಮತ್ತೆ ಸುದ್ದಿಯಾಗುತ್ತಿದೆ.

akshaya college

ಬೆಳ್ಳಾರೆ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಕೊಲೆ ಮಾಡಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.

ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ. ಸ್ಥಳದಲ್ಲಿ ಕೆಂಪು ಕಲ್ಲು ಇದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆಮಾಡಲಾಗಿದೆ ಎಂದು ಹೇಳಲಾಗಿದೆ. ಮೃತ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ.

ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದು, ಮಹಿಳೆಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿಯಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

1 of 115