ಕರಾವಳಿಸ್ಥಳೀಯ

ಗ್ಲೋಬಲ್ ಮಾರುಕಟ್ಟೆ ಬೆಂಕಿಗಾಹುತಿ: ಲಕ್ಷಾಂತರ ರೂ. ನಷ್ಟ! ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ರೂ. ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ದೊರಕಿಸಿಕೊಡುವಂತೆ ಸೂಚಿಸಿದರು.

SRK Ladders

ಬೆಂಕಿಗಾಹುತಿಯಾದ ಅಂಗಡಿ ಮಾಲೀಕರೊಂದಿಗೆ ಪದ್ಮರಾಜ್‌ ಅವರು ಮಾತುಕತೆ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3