Gl harusha
ಸ್ಥಳೀಯ

ನರಿಮೊಗರು ಕಾಂಗ್ರೆಸ್ ವಲಯಾಧ್ಯಕ್ಷ ಪ್ರಕಾಶ್ ನಿಧನ!! ಹಠಾತ್ ಕಾಣಿಸಿಕೊಂಡ ಹೃದಯ ನೋವಿಗೆ ಬಲಿಯಾದ ಯುವಕ ಮಂಡಲದ ಮಾಜಿ ಅಧ್ಯಕ್ಷ!

ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ (40 ವ.) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ (40 ವ.) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು.

srk ladders
Pashupathi
Muliya

ಸಂಜೆ ಮನೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಮಂಗಳವಾರ ಸಂಜೆ ನರಿಮೊಗರು ಪರಿಸರದಲ್ಲಿ ಓಡಾಡುತ್ತಾ ಇದ್ದ ಇವರಿಗೆ, ಹಠಾತ್ ಹೃದಯ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ.

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರಾಗಿರುವ ಇವರು, ನರಿಮೊಗರು ವಲಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಿಂದೂಸ್ಥಾನ್ ಕಾಂಪ್ಲೆಕ್ಸ್ ನಲ್ಲಿ ಹಲವು ವರ್ಷಗಳಿಂದ ಮೊಬೈಲ್ ಸೇಲ್ಸ್ & ಸರ್ವೀಸ್ ಅಂಗಡಿಯನ್ನು ನಡೆಸುತ್ತಿದ್ದರು.

ಟ್ರೈ ಬ್ರೇಕರ್ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿಯೂ, ಟ್ರೈ ಬ್ರೇಕರ್ ಕ್ರಿಕೆಟ್ ತಂಡದ ಸ್ಥಾಪಕ ಸದಸ್ಯನಾಗಿಯೂ ಸಾಮಾಜಿಕ ಜೀವನದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ತಾಯಿ, ಪತ್ನಿ, ಮಕ್ಕಳು, ಸಹೋದರನನ್ನು ಆಗಲಿದ್ದಾರೆ‌.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ