ಸ್ಥಳೀಯ

ಎಲ್ಲೆ ಕರೆಂಟ್ ಇಜ್ಜಿ!! ಎಲ್ಲೆಲ್ಲಿ ವಿದ್ಯುತ್ ನಿಲುಗಡೆ, ಮೆಸ್ಕಾಂ ನೀಡಿದೆ ವಿವರ!

ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್‌ಸಪ್ಲೈ, ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ನಲ್ಲಿ ಜೂ. 13ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್‌ಸಪ್ಲೈ, ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ನಲ್ಲಿ ಜೂ. 13ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ.

ತುರ್ತು ನಿರ್ವಹಣಾ ಕಾಮಗಾರಿ ಮತ್ತು ಉಪ್ಪಿನಂಗಡಿ – ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110 / 33 / 11 ಕೆವಿ ವಿದ್ಯುತ್ ಲೈನಲ್ಲಿ ವಿದ್ಯುತ್ ನಿಲುಗಡೆ ನಡೆಯಲಿದೆ.

SRK Ladders

33 ಕೆವಿ ಪುತ್ತೂರು-ಕಡಬ ವಿದ್ಯುತ್ ಮಾರ್ಗದ ಮುಂಗಾರು ಪೂರ್ವ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ. 13ರಂದು ಪೂರ್ವಾಹ್ನ 10ರಿಂದ ಸಂಜೆ 5 ಗಂಟೆಯವರೆಗೆ 33 ಕೆವಿ ಪುತ್ತೂರು- ಕಡಬ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.

110 / 33 / 11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹಾಗೂ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ನೆಕ್ಕಿಲಾಡಿ ಮತ್ತು ಬಜತ್ತೂರು ಗ್ರಾಮದ ವಿದ್ಯುತ್ ಬಳಕೆದಾರರು ಹಾಗೂ 33 / 11 ಕೆವಿ ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2