Gl harusha
ಸ್ಥಳೀಯ

ಜಾಗೃತಿಗಾಗಿ ಬೀದಿನಾಟಕ ಪ್ರದರ್ಶಿಸಿದ ಕುಂಜೂರುಪಂಜ ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರ

ಕುಂಜೂರುಪಂಜ ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಭಾನುವಾರ ಬೀದಿ ನಾಟಕ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕುಂಜೂರುಪಂಜ ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಭಾನುವಾರ ಬೀದಿ ನಾಟಕ ನಡೆಯಿತು.ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷ ಮಹಾಲಿಂಗ ನಾಯ್ಕ ಉದ್ಘಾಟಿಸಿದರು.

ಸಂಸಾರ ಜೋಡುಮಾರ್ಗ ಕಲಾ ತಂಡದವರು ನೀರಿನ ಬಳಕೆ, ಜ್ಞಾನವಿಕಾಸ ಯೂಟ್ಯೂಬ್ ಕಾರ್ಯಕ್ರಮದ ಬಗ್ಗೆ, ಸಂಚಾರಿ ನಿಯಮದ ಬಗ್ಗೆ, ಮನುಷ್ಯರಿಗೆ ಬರುವ ಇತರ ಕಾಯಿಲೆಗಳ ಬಗ್ಗೆ, ಪ್ಲಾಸ್ಟಿಕ್ ಬಳಕೆಯಿಂದಾಗುವ ಸಮಸ್ಯೆಗಳ ಬಗ್ಗೆ, ಮೊಬೈಲ್ ಬಳಕೆಯಿಂದ ಮಕ್ಕಳಿಗೆ ಹಾಗೂ ಎಲ್ಲರಿಗೂ ಆಗುವ ಸಮಸ್ಯೆಗಳ ಬಗ್ಗೆ ನಾಟಕ ಪ್ರದರ್ಶನದ ಮೂಲಕ ಮಾಹಿತಿಯನ್ನು ನೀಡಿ ಅರಿವು ಮೂಡಿಸಿದರು.ಮೇಲ್ವಿಚಾರಕ ಪ್ರಶಾಂತ್ ಕುಮಾರ್ ಜೆ., ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ, ಸೇವಾಪ್ರತಿನಿಧಿ ಆಶಾ, ಸಂಯೋಜಕಿ ವಿದ್ಯಾಲಕ್ಷ್ಮಿ , ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯರಾದ ವಿನೋದ, ಒಕ್ಕೂಟದ ಮಾಜಿ ಅಧ್ಯಕ್ಷರಾದ ನಾರಾಯಣ ಮೂಲ್ಯ, ನಾರಾಯಣ ನಾಯ್ಕ, ಒಕ್ಕೂಟದ ಪದಾಧಿಕಾರಿಗಳಾದ ಉಮಾವತಿ, ರೇಣುಕಾ, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಬಲ್ನಾಡು ಶೌರ್ಯ ವಿಪತ್ತು ಘಟಕದ ಸದಸ್ಯರು ಒಕ್ಕೂಟದ ಇತರ ಸದಸ್ಯರು ಉಪಸ್ಥಿತರಿದ್ದರು.ಸೇವಾಪ್ರತಿನಿಧಿ ಆಶಾ ಸ್ವಾಗತಿಸಿ, ಸಮನ್ವಯ ಅಧಿಕಾರಿ ಕಾವ್ಯಶ್ರೀ ವಂದಿಸಿದರು.

srk ladders
Pashupathi
Muliya

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ