ಸ್ಥಳೀಯ

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವಯೋಗ ದಿನಾಚರಣೆ

ಯಕ್ಷ ಭಾರತಿ ಕನ್ಯಾಡಿ ಮತ್ತು ತುಳುಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಸಹಯೋಗದಲ್ಲಿ ಹತ್ತನೇ ವಿಶ್ವ ಯೋಗ ದಿನಾಚರಣೆಯನ್ನು ಕನ್ಯಾಡಿ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಯಕ್ಷ ಭಾರತಿ ಕನ್ಯಾಡಿ ಮತ್ತು ತುಳುಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಸಹಯೋಗದಲ್ಲಿ ಹತ್ತನೇ ವಿಶ್ವ ಯೋಗ ದಿನಾಚರಣೆಯನ್ನು ಕನ್ಯಾಡಿ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಸಲಾಯಿತು.

SRK Ladders

ಎಸ್ ಡಿ ಎಂ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಡೀನ್ ಮತ್ತು ವೈಸ್ ಪ್ರಿನ್ಸಿಪಾಲ್ ಶ್ರೀಮತಿ ಸುಜಾತ ದಿನೇಶ್ ಆರೋಗ್ಯ ಪೂರ್ಣ ಜೀವನ ನಡೆಸುವಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿ ಶಿಬಿರದಲ್ಲಿ ಭಾಗವಹಿಸಿದವರ ಜೊತೆ ಸಂವಾದ ನಡೆಸಿದರು.

ಯೋಗ ಪಟು ಸುಶ್ಮಿತಾ ಶೆಟ್ಟಿ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ವೇದಿಕೆಯಲ್ಲಿ ಸೌತಡ್ಕ ಮಹಾಗಣಪತಿ ಕ್ಷೇತ್ರದ ಆಡಳಿತ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ರಾವ್. ಎಂ, ಯಕ್ಷಗಾನ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಉಪಸ್ಥಿತರಿದ್ದರು.

ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ಸ್ವಾಗತಿಸಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ನಿರೂಪಿಸಿದರು. ಸಂಚಾಲಕ ಮಹೇಶ್ ಕನ್ಯಾಡಿ ವಂದಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3