tamanvi
ಸ್ಥಳೀಯ

ಶಿರಾಡಿ: ಸರಣಿ ಅಪಘಾತ; ಕಾರಿನಲ್ಲಿದ್ದ ನಾಲ್ವರಿಗೆ ಗಾಯ

D_shiva_bhat
ಇಲ್ಲಿಗೆ ಸಮೀಪದ ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ರವಿವಾರ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ರವಿವಾರ ಸಂಭವಿಸಿದೆ.

ಈ ಬಗ್ಗೆ ಪೊಲೀಸರಿಗೆ ದೂರು ನೀಡಿರುವ ಬಜತ್ತೂರು ಗ್ರಾಮದ ರೆಂಜಾಲ ಮನೆ ನಿವಾಸಿ ಮನೋಹರ ಎಂಬವರು ತನ್ನ ಮನೆಯವರೊಂದಿಗೆ ಶಿರಾಡಿ ಗ್ರಾಮದ ಗಡಿ ದೇವಸ್ಥಾನಕ್ಕೆಂದು ಕಾರಿನಲ್ಲಿ ಪ್ರಯಾಣಿಸುದ್ದ ವೇಳೆ, ಲಾರಿಯೊಂದು ಎದುರಿನಲ್ಲಿದ್ದ ಕಾರೊಂದಕ್ಕೆ ಢಿಕ್ಕಿ ಹೊಡೆದು ದೂಡಿಕೊಂದು ಬಂದು ಇವರಿದ್ದ ಕಾರಿಗೆ ಢಿಕ್ಕಿ ಹೊಡೆಯುವಂತೆ ಮಾಡಿದ ಪರಿಣಾಮ, ಕಾರಿನಲ್ಲಿದ್ದ ನಾರಾಯಣ, ದಮಯಂತಿ, ಕೂಸಮ್ಮ ಎಂಬವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಎದುರುಗಡೆಯ ಕಾರಿನಲ್ಲಿದ್ದ ಮಹೇಶ್ ಎಂಬವರಿಗೂ ಗಂಭೀರ ಸ್ವರೂಪದ ಗಾಯಗಳಾಗಿದೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 130