ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.
ಸುಬ್ರಮಣ್ಯನ ದರ್ಶನ ಪಜೆದ ಅವರು ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ನಾಣ್ಯಗಳ ತುಲಾಭಾರ ಸೇವೆ ನೆರವೇರಿಸಿದರು. ಈ ವೇಳೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಇತರೆ ಬಿಜೆಪಿ ನಾಯಕರು ಬಿ ಎಸ್ ಯಡಿಯೂರಪ್ಪ ಅವರಿಗೆ ಸಾಥ್ ನೀಡಿದರು.