ದೇಶಸ್ಥಳೀಯ

ಕೇಜ್ರಿವಾಲ್‌ ಬಂಧನಕ್ಕೆ ಸಿಬಿಐಗೆ ಅಧಿಕೃತ ಅನುಮತಿ ನೀಡಿದ ಕೋರ್ಟ್‌

ದಿಲ್ಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಅಧಿಕೃತವಾಗಿ ಬಂಧಿಸಲು ದಿಲ್ಲಿಯ ನ್ಯಾಯಾಲಯವೊಂದು ಇಂದು ಸಿಬಿಐಗೆ ಅನುಮತಿ ನೀಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಹೊಸದಿಲ್ಲಿ: ದಿಲ್ಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಅಧಿಕೃತವಾಗಿ ಬಂಧಿಸಲು ದಿಲ್ಲಿಯ ನ್ಯಾಯಾಲಯವೊಂದು ಇಂದು ಸಿಬಿಐಗೆ ಅನುಮತಿ ನೀಡಿದೆ.

ನ್ಯಾಯಾಧೀಶ ಅಮಿತಾಭ್‌ ರಾವತ್‌ ಆದೇಶ ಹೊರಡಿಸಿದ ನಂತರ ಸಿಬಿಐ ಕೇಜ್ರಿವಾಲ್‌ ಅವರನ್ನು ಬಂಧಿಸಿದೆ.

SRK Ladders

ತಿಹಾರ್‌ ಕೇಂದ್ರ ಕಾರಾಗೃಗದಿಂದ ಆಪ್‌ ನಾಯಕನನ್ನು ನ್ಯಾಯಾಲಯದೆದುರು ಹಾಜರುಪಡಿಸಿದಾಗ ಸಿಬಿಐ ಅವರನ್ನು ಬಂಧಿಸಲು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲಾಯಿತು.

ಅಬಕಾರಿ ಹಗರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ ಪ್ರಸ್ತುತ ಬಂಧನದಲ್ಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3