Gl harusha
ರಾಜ್ಯ ವಾರ್ತೆಸ್ಥಳೀಯ

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ: ಓರ್ವ ಸಾವು!

ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

srk ladders
Pashupathi
Muliya

ಅತಿಶಯ (23) ವರ್ಷ ಮೃತಪಟ್ಟ ಯುವಕ. ತೀರ್ಥಹಳ್ಳಿಯಿಂದ ಐವರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿತ್ತು.

ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಓರ್ವ ಮೃತಪಟ್ಟಿದ್ದಾನೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts