tamanvi
ಕರಾವಳಿಸ್ಥಳೀಯ

ಶಾಲೆಗಳ ರಜೆ ಮುಂದುವರಿಸಿದ ದ.ಕ. ಜಿಲ್ಲಾಧಿಕಾರಿ! ರೆಡ್ ಅಲರ್ಟ್ ಘೋಷಣೆ!!

D_shiva_bhat
ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು : ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

maithri

ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ ಜಿಲ್ಲೆಗೆ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ.

ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು , ಜಿಲ್ಲೆಯಲ್ಲಿ ಹರಿಯುತ್ತಿರುವ ವಿವಿಧ ನದಿಗಳು ತುಂಬಿ ಹರಿಯುತ್ತಿವೆ. ಹಳ್ಳ ಕೊಳ್ಳಗಳಲ್ಲಿಯೂ ನೀರಿನ ಹರಿವು ಹೆಚ್ಚಾಗಿದೆ. ಅಲ್ಲದೇ ಭೂ ಕುಸಿತ , ಗುಡ್ಡ ಕುಸಿತದಂತಹ ದುರ್ಘಟನೆಗಳು ಅಲ್ಲಲ್ಲಿ ವರದಿಯಾಗುತ್ತಿದೆ.

ವಿಪರೀತವಾಗಿ ಬೀಸುತ್ತಿರುವ ಗಾಳಿಯಿಂದ ಮರಗಳು ವಿದ್ಯುತ್‌ ಕಂಬದ ಮೇಲೆ ಬಿದ್ದು ಅವಘಡಗಳು ಸಂಭವಿಸುತ್ತಿದ್ದು ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

1 of 173