Gl harusha
ಕರಾವಳಿಸ್ಥಳೀಯ

ಡಿವೈಡರಿಗೆ ಗುದ್ದಿದ ಕಾರು: ಬೆಳ್ತಂಗಡಿ ಉದ್ಯಮಿ ಪುತ್ರ ಪ್ರಜ್ವಲ್ ನಾಯಕ್ Prajwal Nayak ದಾರುಣ ಸಾವು!!

ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ Prajwal Nayak (35) ಮೃತಪಟ್ಟಿದ್ದಾರೆ.

srk ladders
Pashupathi
Muliya

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ.

ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ Prajwal Nayak ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ Prajwal Nayak ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ.

ಉದ್ಯಮಿ ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ