Gl
ಕೃಷಿಸ್ಥಳೀಯ

ಜು.9: ಮಾಸ್ ಲಿಮಿಟೆಡ್ ನ ಪುತ್ತೂರಿನ ಕಾವು ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ। ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ। ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು

rachana_rai
Pashupathi
akshaya college
Balakrishna-gowda

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಮತ್ತು ಎಸ್ ಬಿ ಜಯರಾಮ ರೈ ಮತ್ತು ಅರಿಯಡ್ಕ ಗ್ರಾ.ಪಂ ಅಧ್ಯಕ್ಷ ಸಂತೋಷ್‌ ಮಣಿಯಾಣಿ ಅತಿಥಿಯಾಗಿ ಭಾಗವಹಿಸಲಿದ್ದಾರೆ.

pashupathi

ಖರೀದಿ ಮಾಡಿದ ಹೆಚ್ಚು ಅಡಿಕೆಗಳನ್ನು ಸಂಸ್ಕರಣೆ ಮಾಡುವ ಬಗ್ಗೆ ಈಗಾಗಲೇ ಇರುವ ನಮ್ಮ ಸುಳ್ಯ ಶಾಖೆಯಲ್ಲಿ ಎಪಿಎಂಸಿ ಯವರಿಂದ ಒಂದು ಹೆಚ್ಚುವರಿ ಗೋದಾಮು ಪಡೆದು ಒಂದು ಸುಸಜ್ಜಿತ ಅಡಿಕೆ ಸಂಸ್ಕರಣೆ ವಿಭಾಗ ಅತಿ ಶೀಘ್ರದಲ್ಲಿ ಪ್ರಾರಂಭಿಸಲಿದ್ದೇವೆ ಎಂದು ಸೀತಾರಾಮ ರೈ ಸವಣೂರು ಹೇಳಿದರು.

ಅಡಿಕೆ ಖರೀದಿ ಕೇಂದ್ರ ಉದ್ಘಾಟನೆಯ ದಿನ ಮಾರುಕಟ್ಟೆ ದರಕ್ಕಿಂತ ಅಡಿಕೆ ಖರೀದಿಯಲ್ಲಿ ರೂ.2 ಹೆಚ್ಚಳ ನೀಡಲಾಗುವುದು ಎಂದು ಕೆ ಸೀತಾರಾಮ ರೈ ಸವಣೂರು ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಕಾವು ಸಿ ಎ ಬ್ಯಾಂಕ್ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಮಾಸ್ ಸಂಸ್ಥೆಯ ನಿರ್ದೇಶಕ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಟಿ ಮಹಾಬಲೇಶ್ವರ ಭಟ್, ಮುಖ್ಯ ಮಾರುಕಟ್ಟೆ ಅಧಿಕಾರಿ ಕೆ ಎಂ ಲೋಕೇಶ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 101