Gl
ಸ್ಥಳೀಯ

ವಳತ್ತಡ್ಕ: ನೇಣು ಬಿಗಿದು ಅನ್ಸರ್ ansar ಆತ್ಮಹತ್ಯೆ!

ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ. ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್ (32) ansar ಆತ್ಮಹತ್ಯೆ ಮಾಡಿಕೊಂಡವರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.

rachana_rai
Pashupathi
akshaya college

ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್ (32) ansar ಆತ್ಮಹತ್ಯೆ ಮಾಡಿಕೊಂಡವರು.

pashupathi

ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಕೆ ಗಾರ್ಬಲ್‌ನಲ್ಲಿ ದುಡಿಯುತ್ತಿದ್ದ ಸಿದ್ದೀಕ್ ಅನ್ಸರ್ ಸರ್ವೆ ಗ್ರಾಮದ ಕಲ್ಪನೆಯಲ್ಲಿ 10 ಸೆಂಟ್ಸ್ ಜಾಗ ಖರೀದಿಸಿ ಮನೆ ನಿರ್ಮಿಸಲು ಅಡಿಪಾಯ ಹಾಕಿದ್ದರು. ಆರ್ಯಾಪು ಗ್ರಾಮದ ಕೊಪ್ಪಳದಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ತಂದೆ, ತಾಯಿ ಹಾಗೂ ಪತ್ನಿ ಮಕ್ಕಳ ಜತೆ ವಾಸ್ತವ್ಯವಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ವಿಪರೀತ ಹೊಟ್ಟೆನೋವು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪುತ್ತೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದ ಅವರು ಗಾರ್ಬಲ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಮನೆ ನಿರ್ಮಿಸುವ ಉದ್ದೇಶದಿಂದ ಸಾಲ ಪಡೆದಿದ್ದ ಅವರು ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100