ಟ್ರೆಂಡಿಂಗ್ ನ್ಯೂಸ್ಸ್ಥಳೀಯ

ಕಡಿದ ನಾಗರ ಹಾವು Cobra snake ಅಂತ್ಯಸಂಸ್ಕಾರದ ವಿಧಿಯಲ್ಲಿ ಭಾಗಿ!! ವಿಸ್ಮಯ ಘಟನೆಗೆ ಸಾಕ್ಷಿಯಾಯಿತೇ ಕುರುಡಪದವು??

tv clinic
ನಾಗರ ಹಾವು ಕಡಿತಕ್ಕೊಳಗಾಗಿ ಮಹಿಳೆಯೋರ್ವರು ಮೃತಪಟ್ಟಿದ್ದರು. ಆಕೆಯ ಅಂತ್ಯಸಂಸ್ಕಾರದ ವಿಧಿಯ ಕೊನೆಯ ಭಾಗವಾದ ನೀರು ಇಡುವ ಕಾರ್ಯಕ್ರಮವೂ ನಡೆದಿತ್ತು. ವಿಸ್ಮಯವೆಂದರೆ, ಈ ಕಾರ್ಯಕ್ರಮಕ್ಕೆ ಆಗಮಿಸಿದ ಹಾವು ಪಾತ್ರದಲ್ಲಿದ್ದ ನೀರನ್ನು ಕುಡಿದು ತೆರಳಿದೆ ಎನ್ನುವ ಮಾತು ಕೇಳಿಬರುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ನಾಗರ ಹಾವು Cobra snake ಕಡಿತಕ್ಕೊಳಗಾಗಿ ಮಹಿಳೆಯೋರ್ವರು ಮೃತಪಟ್ಟಿದ್ದರು. ಆಕೆಯ ಅಂತ್ಯಸಂಸ್ಕಾರದ ವಿಧಿಯ ಕೊನೆಯ ಭಾಗವಾದ ನೀರು ಇಡುವ ಕಾರ್ಯಕ್ರಮವೂ ನಡೆದಿತ್ತು. ವಿಸ್ಮಯವೆಂದರೆ, ಈ ಕಾರ್ಯಕ್ರಮಕ್ಕೆ ಆಗಮಿಸಿದ ನಾಗರ ಹಾವು Cobra snake ಪಾತ್ರದಲ್ಲಿದ್ದ ನೀರನ್ನು ಕುಡಿದು ತೆರಳಿದೆ ಎನ್ನುವ ಮಾತು ಕೇಳಿಬರುತ್ತಿದೆ.

core technologies

ಹೌದು, ಇದು ನಂಬಲು ಕಷ್ಟವಾದರೂ ನಂಬಲೇಬೇಕಾದ ಸುದ್ದಿ. ಮಹಿಳೆಯ ಸಾವಿಗೆ ಕಾರಣವಾದ ನಾಗರ ಹಾವು Cobra snake ಆಕೆಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದೆ ಎಂದರೆ ವಿಸ್ಮಯವಲ್ಲದೇ ಇನ್ನೇನು?

akshaya college

ಕುರುಡುಪದವಿ ನಿವಾಸಿ ಚೋಮು ಎಂಬವರು ಹಾವು ಕಡಿತಕ್ಕೊಳಗಾಗಿ ಮೃತಪಟ್ಟಿದ್ದರು.  ಅವರ ಅಂತ್ಯಸಂಸ್ಕಾರದ ವಿಧಿ ಕಳೆದ ಮೇಲೆ ಮನೆ ಚಾವಡಿಯಲ್ಲಿ ನೀರು ಇಡುವ ಸಂಪ್ರದಾಯ ಇದೆ. ಅದರಂತೆ ಮನೆ ಚಾವಡಿಯಲ್ಲಿ ಬೂದಿ ಹರಡಿ ಅದರ ನಡುವಿನಲ್ಲಿ ಪಾತ್ರವೊಂದರಲ್ಲಿ ನೀರು ಇಡಲಾಗಿತ್ತು.

ಮನೆ ಹಿಂಬದಿ ಬಾಗಿಲು ಭದ್ರ ಪಡಿಸಲಾಗಿತ್ತು. ಮುಂಬಾಗಿಲಿನಲ್ಲಿ ನಾಲ್ಕು ಮಂದಿ ಜನ ಮಲಗಿದ್ದರು. ಆದರೂ ನಾಗರ ಹಾವು Cobra snake ಬಂದು ಪಾತ್ರದಲ್ಲಿದ್ದ ನೀರನ್ನು ಕುಡಿದು ತೆರಳಿದೆಯಂತೆ. ಹಾವು ಬಂದಿರುವುದಕ್ಕೆ ಸಾಕ್ಷಿ ಎಂಬಂತೆ ಬೂದಿ ಮೇಲೆ ಹರಡಿರುವ ಹಾವಿನ ಗುರುತನ್ನು ತೋರಿಸುತ್ತಾರೆ ಮನೆಯವರು.

ಇದಕ್ಕೂ ಮಿಗಿಲಾದ ವಿಷಯವೇನೆಂದರೆ, ಚೋಮು ಅವರ ಸಾವಿಗೆ ಕಾರಣವಾದ ನಾಗರ ಹಾವನ್ನು Cobra snake ಹಾವು ಹಿಡಿಯುವವರು ಬಂದು ಹಿಡಿದುಕೊಂಡು ಕೊಂಡೊಯ್ದಿದ್ದರು. ಹಾಗಾದರೆ ನೀರು ಕುಡಿಯಲು ಬಂದ ಹಾವು ಯಾವುದು ಎನ್ನುವುದೇ ದೊಡ್ಡ ಪ್ರಶ್ನೆ.

ಅದೇನಿದ್ದರೂ, ಸರಳ ಸಜ್ಜನಿಕೆಯ ಚೋಮು ಅವರ ಸಾವಿಗೆ ಜನರು ಮರುಕ ವ್ಯಕ್ತಪಡಿಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

1 of 124