pashupathi
ಕರಾವಳಿಸ್ಥಳೀಯ

ಲಾರಿ – ಸ್ಕೂಟರ್ ಡಿಕ್ಕಿ: ಸವಾರ ಸುಮಿತ್ ಸಾವು

tv clinic
ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ - ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಸಂಭವಿಸಿದೆ.

akshaya college

ಕಾಸರಗೋಡು ಸಮೀಪದ ಬೇಕಲ ನಿವಾಸಿ ಸುಮಿತ್ (24) ಮೃತಪಟ್ಟ‌ ದುರ್ದೈವಿಯಾಗಿದ್ದಾರೆ.

ಸ್ಕೂಟರ್‌ ಸಹಸವಾರ ಗುರುಪ್ರೀತ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಬೆಳ್ತಂಗಡಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಾಗುತ್ತಿದ್ದ ಸ್ಕೂಟರ್ ಗೆ ಎದುರು ನಿಂದ ಬಂಟ್ವಾಳ ಕಡೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಯಾಗಿದೆ. ಅಪಘಾತದ ತೀವ್ರತೆಗೆ ಸುಮಿತ್ ಅವರ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವಿನ್ನಪ್ಪಿದ್ದಾರೆ. ಕೂಡಲೇ ಸ್ಥಳೀಯರು ಗಾಯಾಳು ಗುರುಪ್ರೀತ್ ಅವರನ್ನು ಅಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…

1 of 145