Gl harusha
ಕರಾವಳಿಸ್ಥಳೀಯ

ಮಾದಕ ವಸ್ತು ಎಂಡಿಎಂಎ ಮಾರಾಟ: ಬನ್ನೂರಿನ ಸಫ್ವಾನ್ ಬಂಧನ!

ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

srk ladders
Pashupathi

ಬಂಧಿತ ಆರೋಪಿ ಪುತ್ತೂರಿನ ಬನ್ನೂರು ಗ್ರಾಮದ ಸಫ್ವಾನ್‌ (32) ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸಫ್ವಾನ್‌ ನಿಂದ ಪೊಲೀಸರು ಬೈಕ್ ನ ಸೀಟಿನಲ್ಲಿಟ್ಟಿದ್ದ 90,000 ರೂ. ಮೌಲ್ಯದ 36 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕಮಾಪಕ ಹಾಗೂ ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೋಲಿಸ್ ನಿರೀಕ್ಷಕರಾದ ಶ್ಯಾಂ ಸುಂದರ್ ಹೆಚ್ ಎಂ , ಪಿಎಸ್ಸಿ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts