ಟ್ರೆಂಡಿಂಗ್ ನ್ಯೂಸ್ಸ್ಥಳೀಯ

ಮೆದುಳು ತಿನ್ನುವ ಅಮೀಬಾ amoeba ಸೋಂಕು; ಕರಾವಳಿ ಜಿಲ್ಲೆಯಲ್ಲಿ ಹೈ ಅಲರ್ಟ್

GL
ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿನ (Amoeba Infection) ಪ್ರಕರಣಗಳು ಹೆಚ್ಚಾಗುತ್ತಿದ್ದು ಕೇರಳದಲ್ಲಿ (Kerala) ಭಾರಿ ಆತಂಕ ಸೃಷ್ಟಿಯಾಗಿದೆ. ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಕೇರಳದಲ್ಲಿ ಅಮೀಬಾ ಸೋಂಕು ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಟ್ಟೆಚ್ಚರವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಮಾಹಿತಿಗೆ ಸೂಚಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿನ (Amoeba Infection) ಪ್ರಕರಣಗಳು ಹೆಚ್ಚಾಗುತ್ತಿದ್ದು ಕೇರಳದಲ್ಲಿ (Kerala) ಭಾರಿ ಆತಂಕ ಸೃಷ್ಟಿಯಾಗಿದೆ. ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಕೇರಳದಲ್ಲಿ ಅಮೀಬಾ ಸೋಂಕು ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಟ್ಟೆಚ್ಚರವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಮಾಹಿತಿಗೆ ಸೂಚಿಸಲಾಗಿದೆ.

chennai-shopping
maithri

ನೆಗ್ಗೇರಿಯಾ ಫೌಲೇರಿ ಹೆಸರಿನ ಅಪರೂಪದ ಹಾಗೂ ಅಪಾಯಕಾರಿ ಸೂಕ್ಷ್ಮಾಣು ಜೀವಿಯಿಂದ ಹರಡುವ ಅಮೀಬಾ ಸೋಂಕು ಕೇರಳದಲ್ಲಿ ಕಂಡು ಬಂದಿದೆ. ಕಲುಷಿತ ನೀರಿನಲ್ಲಿರುವ ಪರಾವಲಂಬಿಯಲ್ಲದ ಅಮೀಬಾ ಎಂಬ ಬ್ಯಾಕ್ಟೀರಿಯಾದಿಂದ ಈ ಸೋಂಕು ಹರಡುತ್ತದೆ. ಮೂಗಿನ ಮೂಲಕ ನಮ್ಮ ಶರೀರ ಸೇರುವ ಸೂಕ್ಷ್ಮಾಣು ಜೀವಿ, ಮೆದುಳಿನ ಅಂಗಾಂಶಕ್ಕೆ ಭಾರೀ ಹಾನಿ ಉಂಟುಮಾಡುತ್ತದೆ. ಇದರಿಂದ ಸಾವು ಕೂಡ ಸಂಭವಿಸುತ್ತದೆ.

ಸೋಂಕು ಹರಡುವ ಆತಂಕದ ಹಿನ್ನೆಲೆ ಗಡಿ ಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಲುಷಿತ ನೀರಿನಲ್ಲಿ ಈಜಾಡಿದವರಲ್ಲಿ ಸೋಂಕು ಕಂಡು ಬರುತ್ತಿದೆ. ಹೀಗಾಗಿ ಮಳೆ ನೀರು ನಿಂತ ಹೊಂಡಗಳಲ್ಲಿ, ಕಲುಷಿತ ನೀರಿನಲ್ಲಿ ಈಇನ್ನು ಮತ್ತೊಂದೆಡೆ ಅಮೀಬಾ ಸೋಂಕು ಆತಂಕ ಹಿನ್ನೆಲೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಭೆ ನಡೆಸಿದ್ದು ಸೋಂಕು ಹರಡದಂತೆ ತಡೆಯಲು ಕಲುಷಿತ ಜಲಮೂಲಗಳಲ್ಲಿ ಸ್ನಾನ ಮಾಡದಂತೆ ಸಲಹೆಗಳನ್ನು ನೀಡಿದ್ದಾರೆ. ಈಜುಕೊಳಗಳಿಗೆ ಸರಿಯಾದ ಕ್ಲೋರಿನೇಷನ್ ಆಗಿರಬೇಕು. ಮಕ್ಕಳು ಹೆಚ್ಚಾಗಿ ಈ ರೋಗದಿಂದ ಬಳಲುತ್ತಿರುವ ಕಾರಣ ನೀರಿನೊಳಗೆ ಪ್ರವೇಶಿಸುವಾಗ ಜಾಗರೂಕರಾಗಿರಬೇಕು ಎಂದು ಸಲಹೆ ನೀಡಿದ್ದಾರೆ.

ಜೊತೆಗೆ ಈಜುವಾಗ ಮೂಗಿನ ಕ್ಲಿಪ್‌ಗಳನ್ನು ಬಳಸಿ ಎಂದು ಸಲಹೆ ನೀಡಿದ್ದಾರೆ. ಮುಕ್ತ-ಜೀವಂತ, ಪರಾವಲಂಬಿಯಲ್ಲದ ಅಮೀಬಾ ಬ್ಯಾಕ್ಟೀರಿಯಾಗಳು ಕಲುಷಿತ ನೀರಿನಿಂದ ಮೂಗಿನ ಮೂಲಕ ದೇಹವನ್ನು ಪ್ರವೇಶಿಸಿದಾಗ ಸೋಂಕು ಸಂಭವಿಸುತ್ತದೆ ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ಲೈವ್ ಜ್ಯೂಸ್ ಕೌಂಟರ್ ಆರಂಭಿಸಿದ ಪ್ರಭುಸ್! ಪ್ರಭುಸ್ ಆಗಿ ಮರುನಾಮಕರಣಗೊಂಡ ಪ್ರಭು ಚರುಂಬುರಿ!!

ಪುತ್ತೂರು: ಪ್ರಸಿದ್ಧ ಚರುಂಬುರಿ ಹಾಗೂ ಚಾಟ್ಸ್ ಸಂಸ್ಥೆ ಪ್ರಭು ಚರುಂಬುರಿ ಇದೀಗ ಪ್ರಭುಸ್ ಆಗಿ…

1 of 133