Gl
ಸ್ಥಳೀಯ

ಉಳ್ಳಾಲ ಖಾಝಿ ಕೂರತ್ ತಂಙಳ್ ಹೃದಯಾಘಾತದಿಂದ ನಿಧನ: ಕಡಬದ ಕೂರತ್’ನಲ್ಲಿಂದು ಧಪನ

ಕೂರತ್ ತಂಙಳ್ ಎಂದೇ ಹೆಸರುವಾಸಿಯಾಗಿದ್ದ ಉಳ್ಳಾಲ ಖಾಝಿ, ಮರ್ಹೂಂ ಶೈಖುನಾ ತಾಜುಲ್ ಉಲಮಾ ಅಸೈಯದ್ ಅಬ್ದುರಹ್ಮಾನ್ ಅಲ್ ಬುಖಾರಿ ತಂಜಳ್ ಅವರ ಪುತ್ರ ಅಸೈಯದ್ ಫಝಲ್ ಕೋಯಮ್ಮ ತಂಙಳ್ ಬುಖಾರಿ ಜು.8ರಂದು ಬೆಳಗ್ಗೆ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೂರತ್ ತಂಙಳ್ ಎಂದೇ ಹೆಸರುವಾಸಿಯಾಗಿದ್ದ ಉಳ್ಳಾಲ ಖಾಝಿ, ಮರ್ಹೂಂ ಶೈಖುನಾ ತಾಜುಲ್ ಉಲಮಾ ಅಸೈಯದ್ ಅಬ್ದುರಹ್ಮಾನ್ ಅಲ್ ಬುಖಾರಿ ತಂಜಳ್ ಅವರ ಪುತ್ರ ಅಸೈಯದ್ ಫಝಲ್ ಕೋಯಮ್ಮ ತಂಙಳ್ ಬುಖಾರಿ ಜು.8ರಂದು ಬೆಳಗ್ಗೆ ನಿಧನರಾಗಿದ್ದಾರೆ.

rachana_rai
Pashupathi
akshaya college

65 ವರ್ಷ ಪ್ರಾಯದ ತಂಙಳ್ ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

pashupathi

ಇಂದು ಅಪರಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ಧರಾಗುತ್ತಿದ್ದರು. ಈ ವೇಳೆ ಹೃದಯ ಸ್ತಂಭನ ಆಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಅಪರಾಹ್ನ 2 ಗಂಟೆಯ ವರೆಗೆ ಎಟ್ಟುಕ್ಕುಳಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರಕ್ಕೆ ತರಲಾಗುತ್ತದೆ. ಅಲ್ಲಿ ಸಂಜೆ 5 ಗಂಟೆಯ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಆ ಬಳಿಕ ಕಡಬ ತಾಲೂಕಿನ ಕೂರತ್ ಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ದಫನ ಕಾರ್ಯ ನೆರವೇರಲಿದೆ.

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯ ಕಾಸರಗೋಡು ದೇಳಿಯ ಜಾಮಿಯ ಸಅದಿಯ್ಯ ಇದರ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೂರತ್ ತಂಜಳ್ ಅವರು 2014ರಲ್ಲಿ ತಾಜುಲ್ ಉಲಮಾ ನಿಧನರಾದ ಬಳಿಕ ಉಳ್ಳಾಲ ಖಾಝಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಸಂತಾಪ: ಖಾಝಿ ಕೂರತ್ ತಂಜಳ್ ನಿಧನಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.ಯೆನೆಪೊಯ ಅಬ್ದುಲ್ಲಾ ಕುಂಞಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100