ದೇಶಸ್ಥಳೀಯ

ರಾಹುಲ್ ಬೆಂಬಲಕ್ಕೆ ನಿಂತ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ!

GL
ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿನ ತಮ್ಮ ಭಾಷಣದಲ್ಲಿ ಹಿಂದೂಗಳೆಂದು ಹೇಳಿಕೊಳ್ಳುವವರು ಹಿಂಸಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು ದೇಶಾದ್ಯಂತ ಚರ್ಚೆಯಾಗುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿನ ತಮ್ಮ ಭಾಷಣದಲ್ಲಿ ಹಿಂದೂಗಳೆಂದು ಹೇಳಿಕೊಳ್ಳುವವರು ಹಿಂಸಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು ದೇಶಾದ್ಯಂತ ಚರ್ಚೆಯಾಗುತ್ತಿದೆ.

chennai-shopping
maithri

ಈ ಮಧ್ಯೆ ಉತ್ತರಾಮ್ನಾಯ ಜ್ಯೋತಿಷ್ಪೀಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಕಾಂಗ್ರೆಸ್ ನಾಯಕನ ಬೆಂಬಲಕ್ಕೆ ಧಾವಿಸಿದ್ದಾರೆ.

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣದ ಅಂಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪ್ರಧಾನಿ ಮೋದಿ ಇಡೀ ಹಿಂದೂ ಸಮುದಾಯವನ್ನು ಹಿಂಸಾಚಾರಕ್ಕೆ ತಳುಕು ಹಾಕುವುದು ಗಂಭೀರವಾದ ವಿಷಯ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ, ನಾವು ರಾಹುಲ್ ಗಾಂಧಿ ಅವರ ಇಡೀ ಭಾಷಣವನ್ನು ಗಮನವಿಟ್ಟು ಕೇಳಿದ್ದೇವೆ. ಹಿಂದೂ ಧರ್ಮವು ಹಿಂಸೆಯನ್ನು ತಿರಸ್ಕರಿಸುತ್ತದೆ ಎಂದು ಅವರು ನಿಸ್ಸಂದಿಗ್ಧವಾಗಿ ಒತ್ತಿಹೇಳುತ್ತಾರೆ, ”ಎಂದು ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.

ರಾಹುಲ್ ಗಾಂಧಿ ಭಾಷಣದ ಆಯ್ದ ಪ್ರಸಾರವನ್ನಷ್ಟೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿ ಪ್ರಚಾರ ಮಾಡುತ್ತಿರುವುದನ್ನು ಮಠಾಧೀಶರು ಟೀಕಿಸಿದ್ದಾರೆ. ಸತ್ಯಗಳನ್ನು ತಿರುಚುವವರಿಗೆ ಉತ್ತರದಾಯಿತ್ವವನ್ನು ಅವಿಮುಕ್ತೇಶ್ವರಾನಂದ ಸರಸ್ವತಿ ಒತ್ತಾಯಿಸಿದ್ದಾರೆ.

“ಗಾಂಧಿ ಹೇಳಿಕೆಯ ಆಯ್ದ ತುಣುಕುಗಳನ್ನು ಮಾತ್ರ ಪ್ರಚಾರ ಮಾಡುವುದು ತಪ್ಪು ದಾರಿಗೆಳೆಯುವ ಮತ್ತು ಅನೈತಿಕವಾಗಿದೆ” ಎಂದು ಅವರು ಟೀಕಿಸಿದ್ದಾರೆ. ಇದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂದೂ ಆಗ್ರಹಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 143