ಧಾರ್ಮಿಕಸ್ಥಳೀಯ

ಬೊಳುವಾರು: ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಬಿಡುಗಡೆ

ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ವತಿಯಿಂದ ನಡೆಯಲಿರುವ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರವನ್ನು ಮಂಡಳಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ವತಿಯಿಂದ ನಡೆಯಲಿರುವ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರವನ್ನು ಮಂಡಳಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.

ಆಗಸ್ಟ್ 16ರಂದು ನಡೆಯುವ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಿ, ಸದಸ್ಯರಿಗೆ ಜವಾಬ್ದಾರಿಗಳನ್ನು ಹಂಚಲಾಯಿತು.

SRK Ladders

ಸಲಹಾ ಸಮಿತಿಯ ಸದಸ್ಯ ಪ್ರಕಾಶ್ ಆಚಾರ್ಯ ಮಾತನಾಡಿ, ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಕೋರಿದರು.

ಪ್ರಭಾ ಹರೀಶ್ ಆಚಾರ್ಯ ಮಾತನಾಡಿ, ವಿಶ್ವಕರ್ಮ ಹಿತರಕ್ಷಣಾ ವೇದಿಕೆ ವತಿಯಿಂದ ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿರುವ ಉಚಿತ ಯೋಗ ಥೆರಪಿ ಹಾಗೂ ಆರೋಗ್ಯ ತಪಾಸಣಾ ಶಿಬಿರದ ಬಗ್ಗೆ ಮಾಹಿತಿ ನೀಡಿದರು.

ಮಂಡಳಿ ಉಪಾಧ್ಯಕ್ಷೆ ಎಂ.ಪಿ. ರೋಹಿಣಿ ಆಚಾರ್ಯ ಅವರು ವಾಲ್ ಬೋರ್ಡ್ ಡಿಸೈನ್ ತರಬೇತಿ ನಡೆಸಿಕೊಟ್ಟರು. ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಭವ್ಯಶ್ರೀ ವರದಿ ವಾಚಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3