ಸ್ಥಳೀಯ

ಶ್ರೀ ರಾಮಕೃಷ್ಣ ಸೇವಾ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಪೂರ್ವಭಾವಿ ಸಭೆ

ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ Sri Ramakrishna ಸೇವಾ ಸಮಾಜದಲ್ಲಿ ಪ್ರತಿವರ್ಷದಲ್ಲಿ ಆಚರಿಸುವ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಪೂರ್ವಭಾವಿಯಾಗಿ ಸಿದ್ಧತೆಗಳ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಭೆ ನಡೆಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ Sri Ramakrishna ಸೇವಾ ಸಮಾಜದಲ್ಲಿ ಪ್ರತಿವರ್ಷದಲ್ಲಿ ಆಚರಿಸುವ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಪೂರ್ವಭಾವಿಯಾಗಿ ಸಿದ್ಧತೆಗಳ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಭೆ ನಡೆಸಲಾಯಿತು.

ಹಲವು ಸಂಘ – ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸಲಾಗುವ ಸ್ವಾತಂತ್ರ್ಯೋತ್ಸವದ ರೂಪುರೇಷೆಯನ್ನು ಸಭೆಯಲ್ಲಿ ಚರ್ಚಿಸಲಾಯಿತು.

SRK Ladders

ಇದೇ ಸಂದರ್ಭ ಸೇವಾ ಸಮಾಜಕ್ಕಾಗಿ ಕಡವ ನಾರಾಯಣ ಶರ್ಮಾ ಅವರ ಪುತ್ರ, ಅಮೆರಿಕದಲ್ಲಿ ಇಂಜಿನಿಯರ್ ಆಗಿರುವ ಆನಂದ ಶರ್ಮಾ ಅವರ ಕೊಡುಗೆಯಾಗಿ ನೀಡಿದ 10 ಸಾವಿರ ರೂ.ವನ್ನು ಸಂಸ್ಥೆ ಅಧ್ಯಕ್ಷರಿಗೆ ಹಸ್ತಾಂತರಿಸಲಾಯಿತು. ವಿವೇಕಾನಂದ ಮಹಾವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ. ಎಚ್.ಜಿ. ಶ್ರೀಧರ್ ಅವರು ಹಸ್ತಾಂತರ ಮಾಡಿದರು.

ಶ್ರೀ ರಾಮಕೃಷ್ಣ ಸೇವಾ ಸಮಾಜದ ಅಧ್ಯಕ್ಷ ಸುಬ್ರಹ್ಮಣ್ಯ ಕೊಳತ್ತಾಯ, ಉಪಾಧ್ಯಕ್ಷೆ ಡಾ. ಗೌರಿ ಪೈ, ಕಾರ್ಯದರ್ಶಿ ಗುಣಪಾಲ್ ಜೈನ್, ಉಲ್ಲಾಸ್ ಪೈ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2