ಸ್ಥಳೀಯ

ರಾಜಕೀಯ ಸಂಚಲನಕ್ಕೆ ಕಾರಣವಾದ ಪುಡಾ Puda ಅಧ್ಯಕ್ಷರ ದಿಢೀರ್ ರಾಜೀನಾಮೆ! ಪುಡಾ ಡೆಡ್ ಆಗಿದೆ ಎಂದು ಶಾಸಕರು ಹೇಳಿದ್ದಾದರೂ ಯಾಕೆ?

tv clinic
ಪುಡಾ (ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರ) ಅಧ್ಯಕ್ಷ ಭಾಸ್ಕರ್ ಕೋಡಿಂಬಾಳ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪುಡಾ Puda ಅಧ್ಯಕ್ಷರ ಈ ನಿರ್ಧಾರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುಡಾ (ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರ) ಅಧ್ಯಕ್ಷ ಭಾಸ್ಕರ್ ಕೋಡಿಂಬಾಳ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪುಡಾ Puda ಅಧ್ಯಕ್ಷರ ಈ ನಿರ್ಧಾರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

core technologies

ಪತ್ರಿಕಾಗೋಷ್ಠಿಯಲ್ಲಿ ಅವರು ಈ ನಿರ್ಧಾರವನ್ನು ತಿಳಿಸಿದರು.

akshaya college

ಈಗಾಗಲೇ ರಾಜೀನಾಮೆ ಪತ್ರವನ್ನು ಸರಕಾರಕ್ಕೆ ಕಳುಹಿಸಿಕೊಟ್ಟಿದ್ದೇನೆ. ಕಾಂಗ್ರೆಸ್‌ ಪಕ್ಷ ನನಗೆ ಹಲವಾರು ಹುದ್ದೆ ನೀಡಿದೆ, ಅದನ್ನು ನಿಭಾಯಿಸಿದ್ದೇನೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಪುಡಾ ಅಧ್ಯಕ್ಷ ಸ್ಥಾನಕ್ಕೆ ತನ್ನನ್ನು ಶಾಸಕರೇ ನೇಮಕ ಮಾಡಿದ್ದರು. ಆದರೆ ಅವರೇ ಮೊನ್ನೆ ಬೆಂಗಳೂರಿನಿಂದ ಪುಡಾ ಡೆಡ್ ಆಗಿದೆ. ನಿಮ್ಮ ಕೆಲಸ ಸಾಕಾಗುವುದಿಲ್ಲ ಎಂದು ಕರೆ ಮಾಡಿ ತಿಳಿಸಿದ್ದಾರೆ. ಇದು ನನಗೆ ತುಂಬಾ ಬೇಸರಗೊಂಡು ಮೂರು ದಿನ ಕಳೆದು ನಾನು ಸರಕಾರಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ಪುಡಾ ಅಧ್ಯಕ್ಷ ಭಾಸ್ಕರ ಕೋಡಿಂಬಾಳ ಹೇಳಿದ್ದಾರೆ.

ತಾನು ಸ್ವಲ್ಪ ಸ್ವಾಭಿಮಾನಿ. ಇವತ್ತು ತನ್ನನ್ನು ಯಾರು ನೇಮಕ ಮಾಡಿದ್ದಾರೋ ಅವರಿಗೆ ಅಸಮಾಧಾನ ಇದೆಯೋ ಗೊತ್ತಿಲ್ಲ. ಆದರೆ ನನಗಂತು ಬೇಸರ ಆಗಿದೆ. ನಾನು ಹುದ್ದೆ ಅಪೇಕ್ಷೆ ಮಾಡಿದವನಲ್ಲ. ಎಲ್ಲವೂ ತನ್ನಿಂದ ತಾನೆ ಬಂದದ್ದು ಎಂದವರು ಬೇಸರದಿಂದಲೇ ಮಾತನಾಡಿದರು.

ಪುಡಾ ಡೆಡ್ ಆಗಿದೆ ಎಂದು ಶಾಸಕರು ಯಾಕೆ ಹೇಳಿದ್ದು ಎಂಬುದೇ ಇದೀಗ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118